ಚಲಿಸುತ್ತಿದ್ದ ಬೈಕ್‌ನಲ್ಲಿ ಮದ್ಯಪಾನ ಮಾಡಿ ಅಸಭ್ಯ ವರ್ತನೆ: ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ ರೌಡಿ ಶೀಟರ್ ಸೇರಿ ಇಬ್ಬರು ಆರೋಪಿಗಳ ಬಂಧನ
ಬಂಧಿತರನ್ನು 32 ವರ್ಷದ ಹರೀಶ್ ಮತ್ತು 27 ವರ್ಷದ ನಿತೇಶ್ ಎಂದು ಗುರುತಿಸಲಾಗಿದೆ. ಹರೀಶ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ರೌಡಿ ಶೀಟರ್ ಆಗಿದ್ದು, ಆತನ ವಿರುದ್ಧ 13 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಬೆಂಗಳೂರು: ಚಲಿಸುತ್ತಿದ್ದ ಬೈಕ್ ನಲ್ಲಿ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಿ, ಸಾರ್ವಜನಿಕಕಲ್ಲಿ ಆತಂಕ ಹುಟ್ಟಿಸಿದ ರೌಡಿ ಶೀಟರ್ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತರನ್ನು 32 ವರ್ಷದ ಹರೀಶ್ ಮತ್ತು 27 ವರ್ಷದ ನಿತೇಶ್ ಎಂದು ಗುರುತಿಸಲಾಗಿದೆ. ಹರೀಶ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ರೌಡಿ ಶೀಟರ್ ಆಗಿದ್ದು, ಆತನ ವಿರುದ್ಧ 13 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೊಬ್ಬ ಆರೋಪಿ ನಿತೇಶ್ ಆನಂದಪುರೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾನೆ ಎಂದು ತಿಳಿದುಬಂದಿದೆ.
ಶುಕ್ರವಾರ ರಾತ್ರಿ ತಾವರೆಕೆರೆ ಕಡೆಯಿಂದ ಬೆಂಗಳೂರಿನತ್ತ ಬೈಕ್‌ನಲ್ಲಿ ಬರುತ್ತಿದ್ದ ವೇಳೆ, ಹಿಂಬದಿ ಸವಾರನು ಮದ್ಯದ ಬಾಟಲಿ ಹಿಡಿದು ವಾಹನ ಚಲನೆಯಲ್ಲಿಯೇ ಮದ್ಯ ಸೇವಿಸುತ್ತಿದ್ದು, ಇಬ್ಬರೂ ಜೋರಾಗಿ ಕೂಗಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿ, ಅಸಭ್ಯವಾಗಿ ವರ್ತಿಸುತ್ತಿದ್ದರು. ಈ ವೇಳೆ ಪಶ್ಚಿಮ ವಿಭಾಗದ ಸಂಘಟಿತ ಅಪರಾಧ ದಳದ ಗಸ್ತು ಪೊಲೀಸರು ಇವರನ್ನು ತಡೆದು ವಶಕ್ಕೆ ಪಡೆದಿದ್ದಾರೆ.
ವಿಚಾರಣೆಯಲ್ಲಿ ಹರೀಶ್ ಈ ಹಿಂದೆ ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಪರಾರಿಯಾಗಿದ್ದ ಹಾಗೂ ಆತನ ವಿರುದ್ಧ ವಾರಂಟ್‌ಗಳು ಜಾರಿಯಲ್ಲಿದ್ದವು ಎಂಬುದು ತಿಳಿದುಬಂದಿದೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



