ಕೋಲಾರ: ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಲಿಸುವಾಗ ದುರಂತ; ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ
ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದಾಗ ತಂದೆ ಹಾಗೂ ಇಬ್ಬರು ಮಕ್ಕಳು ಜಲಸಮಾಧಿಯಾಗಿರುವ ದಾರುಣ ಘಟನೆ ಮಾಲೂರಿನ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೋಲಾರ: ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದಾಗ ತಂದೆ ಹಾಗೂ ಇಬ್ಬರು ಮಕ್ಕಳು ಜಲಸಮಾಧಿಯಾಗಿರುವ ದಾರುಣ ಘಟನೆ ಮಾಲೂರಿನ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 40 ವರ್ಷದ ತಂದೆ ಶ್ರೀನಿವಾಸ್, ಮಕ್ಕಳಾದ 13 ವರ್ಷದ ಚೇತನ್ ಮತ್ತು 8 ವರ್ಷದ ರಾಜೇಶ್ ಎಂದು ಗುರುತಿಸಲಾಗಿದೆ. ಭೈರಪ್ಪ ಎಂಬುವರಿಗೆ ಸೇರಿದ ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಳಿಸಲು ಕರೆದುಕೊಂಡು ಹೋಗುತ್ತಿದ್ದಾಗ ಕಾಲು ಜಾರಿ ಮೂವರು ನೀರಿಗೆ ಬಿದ್ದಿದ್ದಾರೆ. ಮೇಲೆ ಬರಲು ಆಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



