ರಾಜ್ಯ

ಮದುವೆಗೆ ಒತ್ತಾಯಿಸಿದ್ದ ಪ್ರೇಯಸಿಯನ್ನೇ ಕೊಂದ ಪ್ರಿಯಕರ: ಕೆರೆಯಲ್ಲಿ ಶವ ಪತ್ತೆ, ಆರೋಪಿ ಬಂಧನ

ಮರಣೋತ್ತರ ಪರೀಕ್ಷಾ ವರದಿಯಲ್ಲಿ ಮಹಿಳೆಯನ್ನು ಉಸಿರುಗಟ್ಟಿಸಿ ಹಾಗೂ ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿತ್ತು. ಇದರಿಂದ ಪೊಲೀಸರು ಸ್ವಯಂಪ್ರೇರಿತವಾಗಿ ಕೊಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.

ಮದುವೆಗೆ ಒತ್ತಾಯಿಸಿದ್ದ ಪ್ರೇಯಸಿಯನ್ನೇ ಕೊಂದ ಪ್ರಿಯಕರ: ಕೆರೆಯಲ್ಲಿ ಶವ ಪತ್ತೆ, ಆರೋಪಿ ಬಂಧನ
ಸಂಗ್ರಹ ಚಿತ್ರ
Published On :

ಬೆಂಗಳೂರು: ಮದುವೆಗಾಗಿ ಒತ್ತಾಯಿಸುತ್ತಿದ್ದ ಪ್ರೇಯಸಿಯನ್ನು ಕೊಲೆ ಮಾಡಿ, ಶವವನ್ನು ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ತಿರುಪಾಳ್ಯ ಕೆರೆಯಲ್ಲಿ ಎಸೆದ ಆರೋಪದ ಮೇರೆಗೆ ಅಸ್ಸಾಂ ಮೂಲದ ಯುವಕನನ್ನು ನಗರದ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತನನ್ನು ಅಸ್ಸಾಂ ಮೂಲದ 27 ವರ್ಷದ ರತನ್ ದಾಸ್ ಎಂದು ಗುರುತಿಸಲಾಗಿದೆ. ಮೃತ ಮಹಿಳೆ 47 ವರ್ಷದವರು ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 9ರಂದು ಅನೇಕಲ್ ತಾಲೂಕಿನ ತಿರುಪಾಳ್ಯ ಕೆರೆಯಲ್ಲಿ ಮಹಿಳೆಯ ಶವ ತೇಲುತ್ತಿರುವುದು ಕಂಡುಬಂದ ನಂತರ ನ ಪ್ರಕರಣ ದಾಖಲಾಗಿತ್ತು.

ಮರಣೋತ್ತರ ಪರೀಕ್ಷಾ ವರದಿಯಲ್ಲಿ ಮಹಿಳೆಯನ್ನು ಉಸಿರುಗಟ್ಟಿಸಿ ಹಾಗೂ ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿತ್ತು. ಇದರಿಂದ ಪೊಲೀಸರು ಸ್ವಯಂಪ್ರೇರಿತವಾಗಿ ಕೊಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.

ಇದೀಗ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯ ಗುರುತು ಪತ್ತೆ ಹಚ್ಚಿ, ಮೇ 14ರಂದು ತಿರುಪಾಳ್ಯದಲ್ಲಿರುವ ಆತನ ವಾಸಸ್ಥಳದಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆಯಲ್ಲಿ ಆರೋಪಿ ಹಾಗೂ ಮೃತ ಮಹಿಳೆ ನಡುವೆ ಅಕ್ರಮ ಸಂಬಂಧವಿದ್ದು, ಮದುವೆಗಾಗಿ ಮಹಿಳೆ ಪದೇಪದೆ ಒತ್ತಾಯಿಸುತ್ತಿದ್ದುದರಿಂದ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎಂದು ಒಪ್ಪಿಕೊಂಡಿದ್ದಾನೆ.

ಮಹಿಳೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ ನಂತರ ಆಕೆಯ ಶವವನ್ನು ಕೆರೆ ಮಧ್ಯದಲ್ಲಿರುವ ಗಿಡಗಂಟಿಗಳ ನಡುವೆ ಎಸೆದಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಮೇ 15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.