ರಾಜ್ಯ

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ನಟ ದರ್ಶನ್?: ಪರಪ್ಪನ ಅಗ್ರಹಾರದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ!

ಈ ಹಿಂದೆ ನಟ ದರ್ಶನ್ ಅವರು ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಬಹುದು. ಅವರಿಗೆ ಸೂಕ್ತ ಮನೋರೋಗ ಚಿಕಿತ್ಸೆಯ ಅಗತ್ಯವಿದೆ ಎಂದು ಮೈಸೂರಿನ ಮನರೋಗ ತಜ್ಞ ಡಾ. ಅಭಿಜಿತ್ ಹನಹೋಡು ಅವರು ಹೇಳಿದ್ದರು.

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ನಟ ದರ್ಶನ್?: ಪರಪ್ಪನ ಅಗ್ರಹಾರದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ!
ನಟ ದರ್ಶನ್
Published On :

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಅವರು ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿದ್ದು, ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದ ಸುತ್ತಮುತ್ತ ಸೋಮವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಆದಾಗ್ಯೂ, ವದಂತಿ ಹರಡುತ್ತಿದ್ದಂತೆ ಜೈಲಿನ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು ಮತ್ತು ವರದಿಗಳು ಕೇವಲ ವದಂತಿ ಎಂದು ದೃಢಪಡಿಸಿದರು.

ಭಾನುವಾರ ರಾತ್ರಿಯಿಂದಲೇ ಈ ರೀತಿ ವದಂತಿಗಳು ಹರಡುತ್ತಿವೆ. ಇದರಿಂದಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಿರ ದೂರವಾಣಿ ಮೂಲಕ ಜೈಲು ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಕೇಳುತ್ತಿದ್ದಾರೆ ಎಂದು ಹಿರಿಯ ಜೈಲು ಸಿಬ್ಬಂದಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

"ನಟ ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಗಳು ಸಂಪೂರ್ಣ ಆಧಾರರಹಿತ ಮತ್ತು ಸತ್ಯಕ್ಕೆ ದೂರವಾಗಿವೆ. ಅಂತಹ ವದಂತಿಗಳನ್ನು ನಂಬಿ ಯಾರೂ ಪರಪ್ಪನ ಅಗ್ರಹಾರ ಕೇಂದ್ರ ಜೈಲಿನ ಬಳಿ ಬರಬಾರದು ಎಂದು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ನಟ ದರ್ಶನ್ ಅವರು ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಬಹುದು. ಅವರಿಗೆ ಸೂಕ್ತ ಮನೋರೋಗ ಚಿಕಿತ್ಸೆಯ ಅಗತ್ಯವಿದೆ ಎಂದು ಮೈಸೂರಿನ ಮನರೋಗ ತಜ್ಞ ಡಾ. ಅಭಿಜಿತ್ ಹನಹೋಡು ಅವರು ಹೇಳಿದ್ದರು. ಇದೀಗ ಆಘಾತಕಾರಿ ವದಂತಿ ಹರಡಿದ್ದು, ಅಭಿಮಾನಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.