NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಮೇ 21ಕ್ಕೆ ರಾಜಭವನ ಚಲೋ; ಯುವ ಕಾಂಗ್ರೆಸ್ ಕರೆ, ಡಿಕೆಶಿ-ಸುರ್ಜೇವಾಲಾ ಭಾಗಿ!
ಕೇಂದ್ರ ಸರ್ಕಾರ ವಿದ್ಯಾರ್ಥಿಗಳನ್ನು ಅಗ್ನಿಕುಂಡಕ್ಕೆ ತಳ್ಳಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲೇ ನಡೆದಿವೆ.

ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಹಾಗೂ ಇಡೀ ದೇಶದಲ್ಲಿ ಪರೀಕ್ಷೆ ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಮೇ 21 ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ರಾಜಭವನ ಚಲೋ ನಡೆಸಲಾಗುವುದು ಎಂದು ಭಾರತೀಯ ಯುವ ಕಾಂಗ್ರೆಸ್ ಘೋಷಿಸಿದೆ.
ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿಯವರು, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಅವಧಿಯಲ್ಲಿ 89 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ ನಡೆದಿದ್ದು, ಇದರಿಂದ ವಿದ್ಯಾರ್ಥಿಗಳ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ವಿದ್ಯಾರ್ಥಿಗಳನ್ನು ಅಗ್ನಿಕುಂಡಕ್ಕೆ ತಳ್ಳಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲೇ ನಡೆದಿವೆ ಎಂದು ದೂರಿದರು.
ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಮಾತನಾಡಿ, ಈ ಪ್ರತಿಭಟನೆ ದೊಡ್ಡ ಮಟ್ಟದಲ್ಲಿ ನಡೆಯಲಿದ್ದು, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಕೇಂದ್ರ ಸರ್ಕಾರವನ್ನು ಟೀಕಿಸಿದ ಅವರು, “ಐಪಿಎಲ್ ಬಳಿಕ ಇದೀಗ ‘ಇಂಡಿಯನ್ ಪೇಪರ್ ಲೀಕ್’ ದೇಶದಲ್ಲಿ ನಡೆಯುತ್ತಿದೆ” ಎಂದು ವ್ಯಂಗ್ಯವಾಡಿದರು.
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಟೀಕಿಸಿದ ಮಂಜುನಾಥ್ ಗೌಡ, “ಜನಿವಾರ ವಿಚಾರದಲ್ಲಿ ಬೀದಿಗಿಳಿದವರು ಈಗ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ಮೌನವಾಗಿದ್ದಾರೆ” ಎಂದು ಆರೋಪಿಸಿದರು.
ರಾಜಸ್ಥಾನದ ಶಿಕ್ಷಣ ಸಚಿವರ ಆಪ್ತರೇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿಂದೆ ಇದ್ದಾರೆ ಎಂದೂ ಕೂಡ ಅವರು ಗಂಭೀರ ಆರೋಪ ಮಾಡಿದರು.
ಇದಲ್ಲದೆ, ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ಸೇರಿದಂತೆ ಹಲವು ವಿಷಯಗಳಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



