ರಾಜ್ಯ

94ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ: ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಬರೀ 1 ರೂಪಾಯಿಗೆ ಭೋಜನ ವ್ಯವಸ್ಥೆ..!

ಕಾರ್ಯಕ್ರಮಕ್ಕೆ ‘ಬಿಗ್ ಬಾಸ್ ಸೀಸನ್-12’ ವಿಜೇತ ಗಿಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದೇವೇಗೌಡರ ಜನ್ಮದಿನದ ಅಂಗವಾಗಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಒದಗಿಸುವ ಮೂಲಕ ವಿಶೇಷ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

94ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ: ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಬರೀ 1 ರೂಪಾಯಿಗೆ ಭೋಜನ ವ್ಯವಸ್ಥೆ..!
ಹೆಚ್.ಡಿ.ದೇವೇಗೌಡ
Published On :

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಇಂದು (ಸೋಮವಾರ) ಬಸವನಗುಡಿಯ ‘ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್’ನಲ್ಲಿ ಕೇವಲ 1 ರೂಪಾಯಿಗೆ ಊಟ ವಿತರಿಸಲಾಗುತ್ತಿದೆ.

ಈ ವಿಶೇಷ ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯ ಹಾಗೂ ಜೆಡಿಎಸ್ ವಿಧಾನಪರಿಷತ್ ಉಪನಾಯಕ ಟಿ.ಎ.ಶರವಣ ಅವರು ಆಯೋಜಿಸಿದ್ದಾರೆ.

ಬಸವನಗುಡಿಯ ಹನುಮಂತನಗರದ 50 ಅಡಿ ರಸ್ತೆಯಲ್ಲಿರುವ ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ ಭೋಜನ ವ್ಯವಸ್ಥೆಯನ್ನು ನಡೆಸಲಾಗುತ್ತಿದೆ.

ಕಾರ್ಯಕ್ರಮಕ್ಕೆ ‘ಬಿಗ್ ಬಾಸ್ ಸೀಸನ್-12’ ವಿಜೇತ ಗಿಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದೇವೇಗೌಡರ ಜನ್ಮದಿನದ ಅಂಗವಾಗಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಒದಗಿಸುವ ಮೂಲಕ ವಿಶೇಷ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.