ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!
Pocso ಪ್ರಕರಣ ಎದುರಿಸುತ್ತಿರುವ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳನ್ನು ಎರಡು ಬಾರಿ ವಿಚಾರಣೆಗೂ ಒಳಪಡಿಸಲಾಗಿದೆ.

ದಾವಣಗೆರೆ: Pocso ಪ್ರಕರಣ ಎದುರಿಸುತ್ತಿರುವ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳನ್ನು ಎರಡು ಬಾರಿ ವಿಚಾರಣೆಗೂ ಒಳಪಡಿಸಲಾಗಿದೆ. ಇನ್ನು ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ತನಿಖಾಧಿಕಾರಿಯನ್ನು ದಿಢೀರ್ ವರ್ಗಾವಣೆ ಮಾಡಿ ದಾವಣಗೆರೆ ಎಸ್‌ಪಿ ಎಚ್ ಟಿ ಶೇಖರ್ ಆದೇಶ ಹೊರಡಿಸಿದ್ದಾರೆ.
ಪಂಚಮಸಾಲಿ ಪೀಠ ಟ್ರಸ್ಟ್ನ ಪದಾಧಿಕಾರಿಗಳು ಪ್ರಕರಣದ ತನಿಖೆ ಸರಿಯಾಗಿ ಮಾಡುತ್ತಿಲ್ಲ ಎಂದು ಪೂರ್ವ ವಲಯ ಐಜಿಪಿ ಬಿ.ಆರ್.ರವಿಕಾಂತೇಗೌಡ ಅವರಿಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ತನಿಖಾಧಿಕಾರಿಯನ್ನು ಬದಲಾಯಿಸುವಂತೆ ಎಸ್ಪಿಗೆ ಸೂಚಿಸಿದ್ದರು. ಈ ಸೂಚನೆ ಮೇರೆಗೆ ಪಿಎಸ್‌ಐ ಮಂಜುಳಾ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ದಾವಣಗೆರೆಯ ಆಜಾದ್‌ನಗರ ಠಾಣೆಯ ಪಿಎಸ್‌ಐ ಜಯರತ್ನಮ್ಮ ಅವರನ್ನ ನೇಮಕ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



