ಹಸು ಮೇಲೆ ಅತ್ಯಾಚಾರ; ಕಾಮುಕನ ಬಂಧಿಸಿದ ಪೊಲೀಸರು, Video
ಬಂಧಿತ 24 ವರ್ಷದ ಆರೋಪಿಯ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಆತ ಡೆಲಿವರಿ ಪಾರ್ಟ್ನರ್ ಆಗಿ ಕೆಲಸ ಮಾಡುತ್ತಿದ್ದು, ಕಳೆದ ಒಂದು ತಿಂಗಳಿನಿಂದ ನಗರದ ಕಾಟನ್‌ಪೇಟೆ ಪ್ರದೇಶದಲ್ಲಿ ವಾಸಿಸುತ್ತಿದ್ದ ಎಂದು ತಿಳಿದುಬಂದಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಮಲಗಿದ್ದ ಹಸುವಿನ ಮೇಲೆ ‘ಲೈಂಗಿಕ ದೌರ್ಜನ್ಯ’ ಎಸಗಿದ ಆರೋಪದಲ್ಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಮೇ 5ರಂದು ರಾತ್ರಿ ಸುಮಾರು 1.47 ಗಂಟೆ ಸುಮಾರಿನಲ್ಲಿ ಬೆಂಗಳೂರಿನ ಅಕ್ಕಿಪೇಟೆ ಕ್ರಾಸ್ ನಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಹಸುವಿನ ಮೇಲೆ “ಲೈಂಗಿಕ ದೌರ್ಜನ್ಯ” ಎಸಗಿದ ಆರೋಪದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಬಂಧಿತ 24 ವರ್ಷದ ಆರೋಪಿಯ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಆತ ಡೆಲಿವರಿ ಪಾರ್ಟ್ನರ್ ಆಗಿ ಕೆಲಸ ಮಾಡುತ್ತಿದ್ದು, ಕಳೆದ ಒಂದು ತಿಂಗಳಿನಿಂದ ನಗರದ ಕಾಟನ್‌ಪೇಟೆ ಪ್ರದೇಶದಲ್ಲಿ ವಾಸಿಸುತ್ತಿದ್ದ ಎಂದು ತಿಳಿದುಬಂದಿದೆ.
ಮೇ 17ರಂದು ಈ ಘಟನೆಯ ವಿಡಿಯೋವನ್ನು ಒಬ್ಬ ಎಕ್ಸ್ (X) ಖಾತೆದಾರ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿ, ಬೆಂಗಳೂರು ನಗರ ಪೊಲೀಸರ ಖಾತೆಗೆ ಟ್ಯಾಗ್ ಮಾಡಿ ಆರೋಪಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಈ ಘಟನೆಯ ನಂತರ, ಪೊಲೀಸರು ಸ್ವಯಂಪ್ರೇರಿತವಾಗಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಗುರುತು ತಿಳಿಯದ ವ್ಯಕ್ತಿಯ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ, 1960ರ ಸೆಕ್ಷನ್ 11 ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 325 (ಪ್ರಾಣಿಯನ್ನು ಕೊಲ್ಲುವುದು ಅಥವಾ ಅಂಗವೈಕಲ್ಯ ಉಂಟುಮಾಡುವ ದುರುದ್ದೇಶಪೂರಿತ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿದರು.
ಪೊಲೀಸರು ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲಿಸಿ, ಘಟನೆ ನಡೆದ ಸ್ಥಳವನ್ನು ಪತ್ತೆಹಚ್ಚಿದರು. ವಿಡಿಯೋದಲ್ಲಿ, ಶಂಕಿತ ವ್ಯಕ್ತಿ ಎರಡು ಚಕ್ರದ ವಾಹನದಲ್ಲಿ ಬಂದು, ನಿರ್ಜನ ರಸ್ತೆಯನ್ನು ಪರಿಶೀಲಿಸಿದ ಬಳಿಕ ಪ್ರಾಣಿಯ ಮೇಲೆ ಕ್ರೌರ್ಯ ಎಸಗಿರುವುದು ಕಾಣಿಸಿದೆ.
ನಂತರ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿ ಹಾಗೂ ಇತರೆ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಲಾಯಿತು. ತನಿಖೆಯಲ್ಲಿ ಆರೋಪಿಗೆ ಯಾವುದೇ ಹಿಂದಿನ ಅಪರಾಧ ದಾಖಲೆಗಳಿಲ್ಲದಿದ್ದರೂ, ವಿಕೃತ ವರ್ತನೆ ತೋರಿದ್ದಾನೆ ಎಂಬುದು ಬೆಳಕಿಗೆ ಬಂದಿದೆ.
“ಲಭ್ಯವಿರುವ ಸಾಕ್ಷ್ಯಗಳು ಹಾಗೂ ಅವನ ಹೇಳಿಕೆಯ ಆಧಾರದ ಮೇಲೆ, ಈ ಅಪರಾಧ ಪ್ರಕರಣದಲ್ಲಿ ಅವನನ್ನು ಬಂಧಿಸಿದ್ದೇವೆ,” ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



