ರಾಜ್ಯ

'ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿದರೆ ನೀವು ಮೋದಿಯವರನ್ನು ಪ್ರಶ್ನೆ ಮಾಡೋದಿಲ್ಲ, ನಮ್ಮನ್ನು ಕೇಳ್ತೀರಾ': ಸಿಎಂ ಸಿದ್ದರಾಮಯ್ಯ; Video

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದಾಗ 2014ರಲ್ಲಿ ಡೀಸೆಲ್ ಬೆಲೆ 48 ರೂಪಾಯಿ, ಪೆಟ್ರೋಲ್ ಬೆಲೆ 70 ರೂಪಾಯಿ ಇತ್ತು, ಗ್ಯಾಸ್ ಸಿಲಿಂಡರ್ ಬೆಲೆ 414 ರೂಪಾಯಿ ಇತ್ತು, ಇಂದು ಇಷ್ಟು ಬೆಲೆ ಏರಿಕೆ ಮಾಡಿದ್ದು ಯಾರು ಎಂದು ಕೇಳಿದರು.

'ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿದರೆ ನೀವು ಮೋದಿಯವರನ್ನು ಪ್ರಶ್ನೆ ಮಾಡೋದಿಲ್ಲ, ನಮ್ಮನ್ನು ಕೇಳ್ತೀರಾ': ಸಿಎಂ ಸಿದ್ದರಾಮಯ್ಯ; Video
ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಕೇಂದ್ರ ಸರ್ಕಾರದವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದಾಗ ನೀವು ಮಾತನಾಡುವುದಿಲ್ಲ, ಮೌನವಾಗಿರುತ್ತೀರಿ, ಅವರನ್ನು ಏನೂ ಪ್ರಶ್ನಿಸುವುದಿಲ್ಲ, ಈಗ ನಮ್ಮನ್ನು ದರ ಇಳಿಸುತ್ತೀರಾ ಎಂದು ಪ್ರಶ್ನೆ ಮಾಡುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದಾಗ 2014ರಲ್ಲಿ ಡೀಸೆಲ್ ಬೆಲೆ 48 ರೂಪಾಯಿ, ಪೆಟ್ರೋಲ್ ಬೆಲೆ 70 ರೂಪಾಯಿ ಇತ್ತು, ಗ್ಯಾಸ್ ಸಿಲಿಂಡರ್ ಬೆಲೆ 414 ರೂಪಾಯಿ ಇತ್ತು, ಇಂದು ಇಷ್ಟು ಬೆಲೆ ಏರಿಕೆ ಮಾಡಿದ್ದು ಯಾರು ಎಂದು ಕೇಳಿದರು.

ರಾಜ್ಯದಿಂದ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ಕಡಿಮೆ ಮಾಡುತ್ತೀರಾ ಎಂದು ಕೇಳಿದ್ದಕ್ಕೆ ಸರಿಯಾಗಿ ಪ್ರತಿಕ್ರಿಯೆ ನೀಡದೆ ಹೋದರು. ನಂತರ ಯುವ ಕಾಂಗ್ರೆಸ್ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ನೀಟ್ ಪರೀಕ್ಷೆ ಅಕ್ರಮದ ಹಿನ್ನೆಯಲ್ಲಿ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ರಾಜೀನಾಮೆ ನೀಡಬೇಕು, ಅವರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸಬೇಕು, ಬಿಜೆಪಿಯವರು ಭಂಡರು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.