ರಾಜ್ಯ

ಮೈಸೂರು: ಕಾರಿನ ಬಾನೆಟ್ ಮೇಲೆ ನೇತಾಡುತ್ತಿದ್ದರೂ 400 ಮೀಟರ್ ಎಳೆದೊಯ್ದ ಆರ್​ಟಿಐ ಕಾರ್ಯಕರ್ತನ ಬಂಧನ; ಶಾಕಿಂಗ್ Video

ಕುವೆಂಪು ನಗರದಲ್ಲಿ ಧನಂಜಯ ಎಂಬುವವರು ಕಾರಿನ ಬಾನೆಟ್ ಮೇಲೆ ನೇತಾಡುತ್ತಿದ್ದರೂ ಕಾರು ನಿಲ್ಲಿಸದೇ ಚಾಲನೆ ಮಾಡಿದ ಆರೋಪದ ಮೇಲೆ ಆರ್​ಟಿಐ ಕಾರ್ಯಕರ್ತ ಗಂಗರಾಜು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು: ಕಾರಿನ ಬಾನೆಟ್ ಮೇಲೆ ನೇತಾಡುತ್ತಿದ್ದರೂ 400 ಮೀಟರ್ ಎಳೆದೊಯ್ದ ಆರ್​ಟಿಐ ಕಾರ್ಯಕರ್ತನ ಬಂಧನ; ಶಾಕಿಂಗ್ Video
ಕಾರಿನ ಬಾನೆಟ್ ಮೇಲೆ ನೇತಾಡುತ್ತಿದ್ದರೂ 400 ಮೀಟರ್ ಎಳೆದೊಯ್ದ ಆರ್​ಟಿಐ ಕಾರ್ಯಕರ್ತ
Published On :

ಮೈಸೂರು: ಮೈಸೂರಿನಲ್ಲಿ ಹಣಕಾಸು ವಿಚಾರಕ್ಕೆ ಆರಂಭವಾದ ಗಲಾಟೆ ಆಘಾತಕಾರಿ ಘಟನೆಗೆ ಸಾಕ್ಷಿಯಾಗಿದ್ದು, ವ್ಯಕ್ತಿಯೊಬ್ಬ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಕುವೆಂಪು ನಗರದಲ್ಲಿ ಧನಂಜಯ ಎಂಬುವವರು ಕಾರಿನ ಬಾನೆಟ್ ಮೇಲೆ ನೇತಾಡುತ್ತಿದ್ದರೂ ಕಾರು ನಿಲ್ಲಿಸದೇ ಚಾಲನೆ ಮಾಡಿದ ಆರೋಪದ ಮೇಲೆ ಆರ್​ಟಿಐ ಕಾರ್ಯಕರ್ತ ಗಂಗರಾಜು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಗಂಗರಾಜು ಅವರು, ಸಬ್ ರಿಜಿಸ್ಟ್ರಾರ್ ಕಚೇರಿ ಬಳಿಯಿಂದ ಕುವೆಂಪುನಗರ ಪೊಲೀಸ್ ಠಾಣೆವರೆಗೆ ಕಾರಿನ ಬಾನೆಟ್ ಮೇಲೆಯೇ ಎಳೆದೊಯ್ದಿದ್ದಾರೆ ಎಂದು ದೂರಿನಲ್ಲಿ ಧನಂಜಯ ಆರೋಪಿಸಿದ್ದಾರೆ.

ಧನಂಜಯ್ ಬಾನೆಟ್‌ಗೆ ಅಂಟಿಕೊಂಡು ತಮ್ಮನ್ನು ತಾವು ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾದರು ಮತ್ತು ಸುಮಾರು 400 ಮೀಟರ್‌ಗಳಷ್ಟು ಎಳೆದೊಯ್ದರು. ಇದು ಸ್ಥಳೀಯ ನಿವಾಸಿಗಳಲ್ಲಿ ಭೀತಿಯನ್ನು ಉಂಟುಮಾಡಿತ್ತು.

ಸುಮಾರು 1 ಕಿಮೀವರೆಗೆ ಚಾಲನೆ ಮಾಡಿದ ಬಳಿಕ ಗಂಗರಾಜು ಅವರು ಕೊನೆಗೆ ಕುವೆಂಪು ನಗರ ಪೊಲೀಸ್ ಠಾಣೆ ಮುಂದೆ ಕಾರು ನಿಲ್ಲಿಸಿದ್ದಾರೆ. ಕೊಟ್ಟ ಹಣ ಕೇಳಿದ್ದಕ್ಕೆ ಗಂಗರಾಜು ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಆರೋಪಿಸಿ ಧನಂಜಯ್​ ಅವರು ಕುವೆಂಪುನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬಂದ ಕುವೆಂಪು ನಗರ ಠಾಣೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಗಂಗರಾಜು ಅವರನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.