ರಾಜ್ಯ

Dharmasthala case: ವಿಧಿ ವಿಜ್ಞಾನ ತಂಡದ ಜೊತೆಗೆ ಮತ್ತೆ ಕಾಡಿಗೆ ತೆರಳಿದ ಎಸ್ ಐಟಿ!

ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ಮೂವರು ಸದಸ್ಯರ ತಂಡವು ಎಸ್‌ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ತಲುಪಿ ಸ್ಥಳದಲ್ಲಿ ವಿವರವಾದ ಪರಿಶೀಲನೆ ನಡೆಸಿದೆ.

Dharmasthala case: ವಿಧಿ ವಿಜ್ಞಾನ ತಂಡದ ಜೊತೆಗೆ ಮತ್ತೆ ಕಾಡಿಗೆ ತೆರಳಿದ ಎಸ್ ಐಟಿ!
ನೇತ್ರಾವತಿ ನದಿ ಪಕ್ಕದ ಬಂಗ್ಲೆಗುಡಿ ಕಾಡು
Published On :

ಮಂಗಳೂರು: ರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಅನೇಕ ಕೊಲೆ, ಅತ್ಯಾಚಾರ ಪ್ರಕರಣಗಳು ನಡೆದಿದ್ದು, ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ವಿಧಿ ವಿಜ್ಞಾನ ತಂಡದ ಅಧಿಕಾರಿಗಳ ಜೊತೆಗೆ ಧರ್ಮಸ್ಥಳದ ನೇತ್ರಾವತಿ ನದಿ ಪಕ್ಕದ ಬಂಗ್ಲೆಗುಡಿ ಕಾಡಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ಮೂವರು ಸದಸ್ಯರ ತಂಡವು ಎಸ್‌ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ತಲುಪಿ ಸ್ಥಳದಲ್ಲಿ ವಿವರವಾದ ಪರಿಶೀಲನೆ ನಡೆಸಿದೆ.

ಈ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ನ್ಯಾಯಾಲಯಕ್ಕೆ ಒಪ್ಪಿಸಿದ್ದ ತಲೆ ಬುರುಡೆಯನ್ನು ಕಾಡಿನಿಂದ ಹೊರತೆಗೆದಿದ್ದ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಬಳಿಕ ಆ ತಲೆ ಬುರುಡೆಯನ್ನು ನಾನು ನೆಲದಿಂದ ಹೊರತೆಗೆದಿಲ್ಲ ಎಂದು ಚಿನ್ನ ಎಸ್ ಪೊಲೀಸರ ಮುಂದೆ ಒಪ್ಪಿಕೊಂಡಿದ್ದ.

ತಲೆಬುರುಡೆ ತೆಗೆಯುವ ದೃಶ್ಯವನ್ನು ಚಿತ್ರೀಕರಿಸಿದ್ದ ಪ್ರದೀಪ್ ಕುಲಾಲ್ ಎಂಬಾತ ಈ ಬಗ್ಗೆಎಸ್ ಐಟಿ ಮುಂದೆ ಹೇಳಿಕೆ ನೀಡಿದ್ದ. ಆತನನ್ನು ಎಸ್ ಐಟಿ ಹಾಗೂ ವಿಧಿ ವಿಜ್ಞಾನ ತಂಡದ ಅಧಿಕಾರಿಗಳು ಜೊತೆಯಲ್ಲಿ ಕಾಡಿನಲ್ಲಿ ಕರೆದೊಯ್ದು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ತಲೆಬುರುಡೆ ಪತ್ತೆಯಾದ ಸ್ಥಳಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದಾಖಲೆಗಳ ಅಗತ್ಯ ಇರುತ್ತದೆ. ಅದಕ್ಕಾಗಿ ವಿಧಿ ವಿಜ್ಞಾನ ತಂಡ ಹಾಗೂ ಎಸ್ ಐಟಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.