'ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ; ಪ್ರತಿಯೊಂದು ಇಲಾಖೆಯಲ್ಲೂ ಲಂಚ ಮಿತಿಮೀರಿದೆ': ಉಪ ಲೋಕಾಯುಕ್ತ
ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ದೊಡ್ಡ ಅಪಾಯ ಎದುರಾಗಲಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸರ್ಕಾರದ ಇಲಾಖೆಗಳ ಅಧಿಕಾರಿಗಳು ಮತ್ತು ನಾಗರಿಕರು ಮನಸ್ಸು ಮಾಡಬೇಕು ಎಂದರು.

ಮಂಡ್ಯ: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಮಿತಿಮೀರಿದ್ದು, ಕರ್ನಾಟಕ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಐದನೇ ಸ್ಥಾನದಲ್ಲಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ.
ಮಂಡ್ಯ ಮತ್ತು ಮಳವಳ್ಳಿ ತಾಲೂಕುಗಳಲ್ಲಿ ಬಾಕಿ ಉಳಿದಿದ್ದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ದೊಡ್ಡ ಅಪಾಯ ಎದುರಾಗಲಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸರ್ಕಾರದ ಇಲಾಖೆಗಳ ಅಧಿಕಾರಿಗಳು ಮತ್ತು ನಾಗರಿಕರು ಮನಸ್ಸು ಮಾಡಬೇಕು ಎಂದರು.
ರಾಜ್ಯದ 16 ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 1,281 ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿವೆ. ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಷನಲ್ ಬಿಡುಗಡೆ ಮಾಡಿರುವ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕವನ್ನು ಇದೇ ಸಂದರ್ಭದಲ್ಲಿ ಉಪ ಲೋಕಾಯುಕ್ತರು ಉಲ್ಲೇಖಿಸಿದರು, 180 ರಾಷ್ಟ್ರಗಳ ಪೈಕಿ ಭಾರತ 91ನೇ ಸ್ಥಾನದಲ್ಲಿದ್ದು, 100ರಲ್ಲಿ 39 ಅಂಕಗಳನ್ನು ಪಡೆದಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಭ್ರಷ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಅವರು, ಅಧಿಕಾರಿಗಳನ್ನು ಜನಸೇವೆಗೆ ನೇಮಿಸಲಾಗಿದೆ. ಅವರು ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು. ಇಲ್ಲವಾದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ ಕಲ್ಪಿಸುವ ಉದ್ದೇಶ ಹೊಂದಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


