ಮತದಾನದ ಹಕ್ಕು ಕೈತಪ್ಪಿದರೆ, ಪೆನ್ಷನ್-ಗೃಹಲಕ್ಷ್ಮಿ ಸೇರಿ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ: ಡಿಸಿಎಂ ಎಚ್ಚರಿಕೆ
ನಮ್ಮ ಪಕ್ಷದ ಕಾರ್ಯಕರ್ತರು ಈ ಪ್ರಕ್ರಿಯೆಯ ಬಗ್ಗೆ ಅತ್ಯಂತ ಜಾಗರೂಕರಾಗಿರಬೇಕು ಎಂದು ಸೂಚಿಸಿದ್ದೇನೆ. ಈಗಾಗಲೇ ಸಭೆಗಳನ್ನು ಕರೆಯಲಾಗುತ್ತಿದ್ದು, ದಿನಾಂಕಗಳನ್ನೂ ಪ್ರಕಟಿಸಲಾಗಿದೆ. ಇದೇ ಕಾರಣಕ್ಕೆ ನಾವು ಜಾಗೃತಿ ಮೂಡಿಸಲು ಮುಂದಾಗಿದ್ದೇವೆ.

ಬೆಂಗಳೂರು: ಮತದಾರರ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ಮೂಲಕ ಬಡವರ ಮತಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಕುರಿತು ಕಾಂಗ್ರೆಸ್ ಶಾಸಕರು ಮತ್ತು ಬೂತ್ ಮಟ್ಟದ ಏಜೆಂಟ್‌ಗಳಲ್ಲಿ ಜಾಗೃತಿ ಮೂಡಿಸಲು ಪಕ್ಷವು ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.
ನಮ್ಮ ಪಕ್ಷದ ಕಾರ್ಯಕರ್ತರು ಈ ಪ್ರಕ್ರಿಯೆಯ ಬಗ್ಗೆ ಅತ್ಯಂತ ಜಾಗರೂಕರಾಗಿರಬೇಕು ಎಂದು ಸೂಚಿಸಿದ್ದೇನೆ. ಈಗಾಗಲೇ ಸಭೆಗಳನ್ನು ಕರೆಯಲಾಗುತ್ತಿದ್ದು, ದಿನಾಂಕಗಳನ್ನೂ ಪ್ರಕಟಿಸಲಾಗಿದೆ. ಇದೇ ಕಾರಣಕ್ಕೆ ನಾವು ಜಾಗೃತಿ ಮೂಡಿಸಲು ಮುಂದಾಗಿದ್ದೇವೆ.
ಪ್ರತಿಯೊಬ್ಬರೂ ಈ ನಿಟ್ಟಿನಲ್ಲಿ ಅರ್ಜಿ ಸಲ್ಲಿಸುವುದು ಅನಿವಾರ್ಯವಾಗಿದೆ, ಇಲ್ಲದಿದ್ದರೆ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳಬೇಕಾಗುತ್ತದೆ. ಇತರ ರಾಜ್ಯಗಳಲ್ಲಿಯೂ ಇಂತಹ ಘಟನೆಗಳು ನಡೆದಿರುವುದನ್ನು ನಾವು ನೋಡಿದ್ದೇವೆ. ಒಂದೊಮ್ಮೆ ಮತದಾನದ ಹಕ್ಕು ಕೈತಪ್ಪಿದರೆ, ನಾಗರಿಕರು ಪೆನ್ಷನ್ ಮತ್ತು ಗೃಹಲಕ್ಷ್ಮಿ ಯೋಜನೆಯೂ ಸೇರಿದಂತೆ ಸರ್ಕಾರದ ಹಲವು ಸೌಲಭ್ಯಗಳಿಂದ ವಂಚಿತರಾಗಲಿದ್ದಾರೆ. ಹೀಗಾಗಿಯೇ ನಾವು ಜನರಲ್ಲಿ ಜಾಗೃತಿ ಮೂಡಿಸಲು ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


