ರಾಜ್ಯ

ಕಲಬುರಗಿ: ಕ್ರೂಸರ್-ಲಾರಿ ಢಿಕ್ಕಿ; ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು; Video

ಮೃತ ಐವರೂ ಚಿತ್ತಾಪೂರ ತಾಲೂಕಿನ ಇಂಗಳಗಿ ಗ್ರಾಮದ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ.

ಕಲಬುರಗಿ: ಕ್ರೂಸರ್-ಲಾರಿ ಢಿಕ್ಕಿ; ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು; Video
Published On :

ಕಲಬುರಗಿ: ಜಿಲ್ಲೆಯ ಚಿತ್ತಾಪೂರ ತಾಲೂಕಿನ ಲಾಡ್ಲಾಪೂರ ಬಳಿ ಕ್ರೂಸರ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾದಗಿರಿ ಆಸ್ಪತ್ರೆಯಿಂದ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ಅಪಫಾತದಲ್ಲಿ ಒಂದೇ ಕುಟುಂಬದ ಐವರ ಸಾವು

ಮೃತ ಐವರೂ ಚಿತ್ತಾಪೂರ ತಾಲೂಕಿನ ಇಂಗಳಗಿ ಗ್ರಾಮದ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ತೋಲುಸಾಬ್ ಕ್ಯಾಶ್ವಾರ್ (27ವ), ಹುಸೇನ್ ಶಾ (48ವ), ಮೈಬೂಬ್ ಅಲಿ (45ವ), ರಸೂಲ್ ಬೀ (42ವ), ಫಾತೀಮಾ ಅಲೀ (38ವ) ಮೃತರಾಗಿದ್ದಾರೆ.

ಲಾಡ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ ರಭಸಕ್ಕೆ ಕ್ರೂಸರ್ ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಲಬುರಗಿ ಎಸ್‌ಪಿ ಎ. ಶ್ರೀನಿವಾಸುಲು ಸ್ಥಳಕ್ಕೆ ಭೇಟಿ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.