ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ, ಹಾಕಿಕೊಂಡು ಬಂದ್ರೆ ಕಾನೂನು ಕ್ರಮ: ಮಧು ಬಂಗಾರಪ್ಪ ಎಚ್ಚರಿಕೆ
ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಅದು ಸಮಾನತೆಯ ಸಂಕೇತ ಎಂದು ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ. ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಎಚ್ಚರಿಕೆ ನೀಡಿದ್ದಾರೆ.
ಜೂನ್ 1 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗಲಿದ್ದು, ಮತ್ತೆ ಹಿಜಾಬ್ ಹಾಗೂ ಕೇಸರಿ ಶಾಲು ಸದ್ದು ಮಾಡುತ್ತಿವೆ. ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವರು, ಹಿಜಾಬ್ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹಿಜಾಬ್ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲೇ ಹೇಳಿದ್ದೇವು. ಜನರು ಮತ ಕೊಟ್ಟಿದ್ದಾರೆ, ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ ಎಂದರು.
ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಅದು ಸಮಾನತೆಯ ಸಂಕೇತ ಎಂದು ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.
ರಾಜ್ಯ ಸರ್ಕಾರದ ಯಾವುದೇ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ. ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್ ಇದೆ ಎಂಬುದನ್ನು ಬಿಜೆಪಿಯವರು ಮೊದಲು ನೋಡಿಕೊಂಡು ಬರಲಿ ಎಂದು ಕಿಡಿಕಾರಿದ್ದಾರೆ.
ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಶಿವದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಆದರೆ ಹೊಸದಾಗಿ ಕೇಸರಿ ಶಾಲು ಧರಿಸುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



