ರಾಜ್ಯ

ಪರೀಕ್ಷೆ ಮುಗಿದ ಹತ್ತೇ ನಿಮಿಷಗಳಲ್ಲಿ ಫಲಿತಾಂಶ ಪ್ರಕಟ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸಾಧನೆ!

56,192 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪ್ರಾಯೋಗಿಕ ಪರೀಕ್ಷೆಗಳು ನಿನ್ನೆ ಸಂಜೆ 5.30ಕ್ಕೆ ಮುಕ್ತಾಯಗೊಂಡಿದ್ದು, 5.40ಕ್ಕೆ ಫಲಿತಾಂಶ ಪ್ರಕಟಿಸಲಾಯಿತು.

ಪರೀಕ್ಷೆ ಮುಗಿದ ಹತ್ತೇ ನಿಮಿಷಗಳಲ್ಲಿ ಫಲಿತಾಂಶ ಪ್ರಕಟ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸಾಧನೆ!
ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ
Published On :

ಬೆಂಗಳೂರು: ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಹೊಸ ದಾಖಲೆ ನಿರ್ಮಿಸಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಅಂತಿಮ ಸೆಮಿಸ್ಟರ್‌ ಬಿಇ ಮತ್ತು ಬಿಟೆಕ್ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ ಕೇವಲ 10 ನಿಮಿಷಗಳಲ್ಲಿ ನಿನ್ನೆ ಶುಕ್ರವಾರ ಪ್ರಕಟಿಸಿದೆ.

ವಿಶ್ವವಿದ್ಯಾಲಯದ ಪ್ರಕಾರ, 56,192 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪ್ರಾಯೋಗಿಕ ಪರೀಕ್ಷೆಗಳು ನಿನ್ನೆ ಸಂಜೆ 5.30ಕ್ಕೆ ಮುಕ್ತಾಯಗೊಂಡಿದ್ದು, 5.40ಕ್ಕೆ ಫಲಿತಾಂಶ ಪ್ರಕಟಿಸಲಾಯಿತು. ಒಟ್ಟು ಫಲಿತಾಂಶ ಶೇಕಡಾ 99.98 ಆಗಿದೆ. ಉಪಕುಲಪತಿ ಎಸ್. ವಿದ್ಯಾಶಂಕರ್ ಹಾಗೂ ಮೌಲ್ಯಮಾಪನ ವಿಭಾಗದ ಕುಲಸಚಿವ ಯು.ಜೆ. ಉಜ್ವಲ್ ಅವರು ಫಲಿತಾಂಶವನ್ನು ಜಂಟಿಯಾಗಿ ಪ್ರಕಟಿಸಿದರು.

10 ನಿಮಿಷಗಳಲ್ಲಿ ಫಲಿತಾಂಶ ಪ್ರಕಟಿಸಿದ್ದು ಹೇಗೆ?

ವಿಟಿಯು ತಿಳಿಸಿದಂತೆ, ವಿಶ್ವವಿದ್ಯಾಲಯ ವ್ಯಾಪ್ತಿಯ 220 ಎಂಜಿನಿಯರಿಂಗ್ ಕಾಲೇಜುಗಳ ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆಗಳು ಮೇ ಮೊದಲ ವಾರದಿಂದಲೇ ನಡೆದಿದ್ದವು. ಸಿದ್ಧಾಂತ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಈಗಾಗಲೇ ಮೌಲ್ಯಮಾಪನ ಮಾಡಿ ಡಿಜಿಟಲ್ ರೂಪದಲ್ಲಿ ಸಂಗ್ರಹಿಸಲಾಗಿತ್ತು.

ಪ್ರಾಯೋಗಿಕ ಪರೀಕ್ಷೆಗಳು ಶುಕ್ರವಾರ ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ನಡೆದವು. ಪರೀಕ್ಷೆ ಮುಗಿದ ಐದು ನಿಮಿಷಗಳಲ್ಲೇ ಅಂಕಗಳನ್ನು ಸಂಗ್ರಹಿಸಿ, 10 ನಿಮಿಷಗಳಲ್ಲಿ ಫಲಿತಾಂಶವನ್ನು ಸಂಸ್ಕರಿಸಿ ಪ್ರಕಟಿಸಲಾಯಿತು.

ಪ್ರೊ. ವಿದ್ಯಾಶಂಕರ್ ಅವರು, ಪರೀಕ್ಷೆ ಮತ್ತು ಮೌಲ್ಯಮಾಪನ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಅಳವಡಿಕೆಗೆ ವಿಟಿಯು ಸದಾ ಆದ್ಯತೆ ನೀಡುತ್ತಿದೆ ಎಂದು ಹೇಳಿದರು. ಪರೀಕ್ಷೆ ಮುಗಿದ 10 ನಿಮಿಷಗಳಲ್ಲಿ ಫಲಿತಾಂಶ ಪ್ರಕಟಿಸುವುದು ಸುಲಭದ ಕೆಲಸವಲ್ಲ. ಅಂತಿಮ ವರ್ಷದ ವಿದ್ಯಾರ್ಥಿಗಳು ಉದ್ಯೋಗ ಮತ್ತು ಉನ್ನತ ಶಿಕ್ಷಣದ ಅವಕಾಶಗಳಿಗಾಗಿ ಫಲಿತಾಂಶ ಕಾಯುತ್ತಿರುತ್ತಾರೆ. ಆದ್ದರಿಂದ ಯಾವುದೇ ವಿಳಂಬವಾಗದಂತೆ ನೋಡಿಕೊಳ್ಳಲು ನಾವು ಪ್ರಯತ್ನಿಸಿದ್ದೇವೆ ಎಂದು ಹೇಳಿದರು. ಈ ಸಾಧನೆಗೆ ಪರೀಕ್ಷಾ ವಿಭಾಗದ ಸಿಬ್ಬಂದಿ, ಆಡಳಿತಾಧಿಕಾರಿಗಳು ಹಾಗೂ ಸಂಯೋಜಿತ ಕಾಲೇಜುಗಳ ಜಂಟಿ ಪ್ರಯತ್ನ ಕಾರಣ ಎಂದರು.

ಕಳೆದ ವರ್ಷ 1 ಗಂಟೆಯಲ್ಲಿ ಫಲಿತಾಂಶ

ಪ್ರೊ. ಉಜ್ವಲ್, ಉತ್ತರ ಪತ್ರಿಕೆಗಳ ಡಿಜಿಟಲ್ ಮೌಲ್ಯಮಾಪನ ಮತ್ತು ಪೂರ್ವ ಸಿದ್ಧತೆಯಿಂದಲೇ ಇಷ್ಟು ವೇಗವಾಗಿ ಫಲಿತಾಂಶ ಪ್ರಕಟಿಸಲು ಸಾಧ್ಯವಾಯಿತು ಎಂದು ಹೇಳಿದರು. ವಿದ್ಯಾರ್ಥಿಗಳ ಮೊಬೈಲ್‌ಗಳಿಗೆ ನೇರವಾಗಿ ಫಲಿತಾಂಶ ಕಳುಹಿಸಲಾಯಿತು ಎಂದೂ ತಿಳಿಸಿದರು.

ಕಳೆದ ವರ್ಷ ಮೇ ತಿಂಗಳಲ್ಲಿ 50,321 ವಿದ್ಯಾರ್ಥಿಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ ಒಂದು ಗಂಟೆಯೊಳಗೆ ಪ್ರಕಟಿಸಲಾಗಿತ್ತು. 2024ರ ಮೇನಲ್ಲಿ 37,011 ವಿದ್ಯಾರ್ಥಿಗಳ ಫಲಿತಾಂಶ ಮೂರು ಗಂಟೆಗಳಲ್ಲಿ ಪ್ರಕಟವಾಗಿದ್ದರೆ, 2023ರಲ್ಲಿ 43,662 ವಿದ್ಯಾರ್ಥಿಗಳ ಫಲಿತಾಂಶ ಪರೀಕ್ಷೆ ಮುಗಿದ ಎರಡು ದಿನಗಳ ಬಳಿಕ ಪ್ರಕಟಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.