ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ; ಪ್ರಧಾನ ಮಂತ್ರಿ ಪರಿಹಾರ ಘೋಷಣೆ; Video
ನಾಪತ್ತೆಯಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಇಂದು ಪತ್ತೆಯಾಗಿದೆ. ಎನ್ಡಿಆರ್ಎಫ್, ಈಶ್ವರ ಮಲ್ಪೆ ತಂಡ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೃತದೇಹವನ್ನು ಪತ್ತೆ ಮಾಡಿ ಹೊರತೆಗೆಯಲಾಗಿದೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಅಳ್ವೆಕೋಡಿ ಕಡಲತೀರ ಪ್ರದೇಶದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ ಇಂದು 11ಕ್ಕೆ ಏರಿಕೆಯಾಗಿದೆ. 11 ಜನರ ಪೈಕಿ ನಿನ್ನೆ 10 ಜನರ ಮೃತದೇಹಗಳು ಪತ್ತೆಯಾಗಿದ್ದವು.
ನಾಪತ್ತೆಯಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಇಂದು ಪತ್ತೆಯಾಗಿದೆ. ಎನ್ಡಿಆರ್ಎಫ್, ಈಶ್ವರ ಮಲ್ಪೆ ತಂಡ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೃತದೇಹವನ್ನು ಪತ್ತೆ ಮಾಡಿ ಹೊರತೆಗೆಯಲಾಗಿದೆ. ಆ ಮೂಲಕ ನೀರಿನ ಅಬ್ಬರಕ್ಕೆ 11 ಮಂದಿ ಜಲ ಸಮಾಧಿಯಾಗಿದ್ದರೆ, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.
ತಾಯಿ ಉಳಿಸಲು ಹೋಗಿ ಮಗನೂ ಸಾವು
ಮೃತರ ಪೈಕಿ ಮಾಸ್ತಮ್ಮ ನಾಯ್ಕ್ ಅವರನ್ನು ಉಳಿಸಲು ಹೋಗಿ ಅವರ ಮಗ ಉಮೇಶ್ ನಾಯ್ಕ್ ಕೂಡ ನೀರುಪಾಲಾಗಿದ್ದಾರೆ. ತಾಯಿ ನೀರಲ್ಲಿ ಕಪ್ಪೆಚಿಪ್ಪು ಹೆಕ್ಕುತ್ತಿದ್ದರೆ ಮಗ ಉಮೆಶ್, ಬಂಡೆ ಮೇಲೆ ಕಪ್ಪು ಚಿಪ್ಪು ಹೆಕ್ಕುತ್ತಿದ್ದರು. ತಾಯಿ ನೀರಲ್ಲಿ ಮುಳುಗುತ್ತಿದ್ದಿದ್ದು ಕಂಡಿದ್ದೇ ತಡ ಆಕೆಯ ರಕ್ಷಣೆಗೆಂದು ಅವರು ಕೂಡ ನೀರಿಗೆ ಹಾರಿದ್ದರು. ತಾಯಿ ದಪ್ಪ ಇದ್ದಿದ್ದರಿಂದ ಆಕೆಯನ್ನು ಎಷ್ಟೇ ಎಳೆಯಲು ಪ್ರಯತ್ನಿಸಿದರೂ ಬದುಕಿಸಲು ಸಾಧ್ಯವಾಗಿಲ್ಲ. ಹೀಗಾಗಿ ನೀರಿಂದ ಆತ ಹಿಂದಿರುಗುವ ವೇಳೆ ಮತ್ತಿಬ್ಬರು ತಮ್ಮ ರಕ್ಷಣೆಗಾಗಿ ಉಮೇಶ್ ಕಾಲು ಎಳೆದಿದ್ದಾರೆ. ಹೀಗಾಗಿ ಅವರೂ ನೀರಲ್ಲಿ ಮುಳುಗಿ ಮೃತಪಟ್ಟಿರೋದಾಗಿ ಪ್ರತ್ಯಕ್ಷದರ್ಶಿ ಮಂಜುನಾಥ್ ನಾಯ್ಕ್ ತಿಳಿಸಿದ್ದಾರೆ.
ಅವಘಡದಲ್ಲಿ ಮಾದೇವ ನಾಯ್ಕ್ ಮತ್ತು ಲಕ್ಷ್ಮಿ ನಾಯ್ಕ್ ದಂಪತಿ ಅಸುನೀಗಿದ್ದು, ತಂದೆ ತಾಯಿ ಇಬ್ಬರೂ ನೀರುಪಾಲಾದ ಹಿನ್ನೆಲೆ ಮಕ್ಕಳಾದ ದರ್ಶನ (23), ಕಿರ್ತನಾ(20) ಈಗ ಅನಾಥರಾಗಿದ್ದಾರೆ. ಮತ್ತೊಂದೆಡೆ ಅವಘಡದಲ್ಲಿ ಮೃತ ಲಕ್ಷ್ಮೀ ಶಿವರಾಮ ನಾಯ್ಕ್ ಅವರ ಪತಿ ಕೂಡ 10 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹೀಗಾಗಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಓದುತ್ತಿದ್ದ ನಾಲ್ವರು ಮಕ್ಕಳಿಗೆ ಅಮ್ಮನೇ ಅಧಾರವಾಗಿದ್ದರು. ಆದರೀಗ ಆಕೆಯೂ ಮೃತಪಟ್ಟಿರೋದು ಮಕ್ಕಳಿಗೆ ದಿಕ್ಕು ತೋಚದಂತೆ ಮಾಡಿದೆ.
ಪ್ರಧಾನಿ ಪರಿಹಾರ ಘೋಷಣೆ
ಭೀಕರ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ(PMNRF)ಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ರೂ. ನೆರವು ನೀಡಲಾಗುವುದು ಎಂದೂ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, “ಕರ್ನಾಟಕದ ಕಾರವಾರ ಜಿಲ್ಲೆಯಲ್ಲಿ ನಡೆದ ಘಟನೆಯನ್ನು ಕೇಳಿ ತೀವ್ರ ನೋವುಂಟಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ” ಎಂದು ಪ್ರಧಾನಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


