ರಾಜ್ಯ

ಭಟ್ಕಳ: ದೇವಸ್ಥಾನ ನಿರ್ಮಾಣ ವಿಚಾರವಾಗಿ ಹಿಂದೂ-ಮುಸ್ಲಿಮರ ಮಧ್ಯೆ ಘರ್ಷಣೆ; ಸ್ಥಳದಲ್ಲಿ ಉದ್ವಿಗ್ನತೆ; Video

ಸ್ಥಳೀಯ ಮುಸ್ಲಿಂ ಸಮುದಾಯದವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದೆ.

ಭಟ್ಕಳ: ದೇವಸ್ಥಾನ ನಿರ್ಮಾಣ ವಿಚಾರವಾಗಿ ಹಿಂದೂ-ಮುಸ್ಲಿಮರ ಮಧ್ಯೆ ಘರ್ಷಣೆ; ಸ್ಥಳದಲ್ಲಿ ಉದ್ವಿಗ್ನತೆ; Video
ಹಲವು ವರ್ಷಗಳಿಂದ ಒಂದು ಪೂಜಾಸ್ಥಳ ಇದ್ದು, ಅಭಿವೃದ್ಧಿ ಕಾಮಗಾರಿಗಳಿಗಾಗಿ ಅಧಿಕಾರಿಗಳು ಅದನ್ನು ತೆರವುಗೊಳಿಸಿದ್ದರು.
Published On :

ಭಟ್ಕಳ: ಭಟ್ಕಳ ಪಟ್ಟಣದಲ್ಲಿ ನಿನ್ನೆ ಭಾನುವಾರ ರಾತ್ರಿ ಹಠಾತ್ ಆಗಿ ಹಿಂದೂ-ಮುಸ್ಲಿಂ ಸಮುದಾಯಗಳ ಮಧ್ಯೆ ಉದ್ವಿಗ್ನತೆ ಉಂಟಾಗಿ, ಪರಿಸ್ಥಿತಿ ಹದಗೆಡದಂತೆ ತಡೆಯಲು ಹಾಗೂ ಶಾಂತಿ ಕಾಪಾಡಲು ತಾಲ್ಲೂಕು ಪೊಲೀಸರು ಲಘು ಲಾಠಿಚಾರ್ಜ್ ನಡೆಸಿದರು.

ಭಟ್ಕಳ ಸಮೀಪದ ಶಿರಾಲಿಯಲ್ಲಿ ಮುಳುಗಿ 11 ಮಂದಿ ಮೃತಪಟ್ಟ ದುರಂತದ ನಡುವೆಯೇ, ನಿನ್ನೆ ರಾತ್ರಿ ಭಟ್ಕಳ ಪಟ್ಟಣದಲ್ಲಿ ಹಿಂದೂ-ಮುಸ್ಲಿಂ ಸಮುದಾಯಗಳ ಮಧ್ಯೆ ಘರ್ಷಣೆ ನಡೆದಿದೆ. ಈ ಘಟನೆ ಮೊದಲು ತೆರವುಗೊಳಿಸಲಾಗಿದ್ದ ಒಂದು ಕಟ್ಟಡ ಸ್ಥಳದಲ್ಲಿ ಮತ್ತೆ ನಿರ್ಮಿಸಲು ಮುಂದಾದಾಗ ಸಂಭವಿಸಿದೆ.

ಆದರೆ ಸ್ಥಳೀಯ ಮುಸ್ಲಿಂ ಸಮುದಾಯದವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದೆ.

ಸ್ಥಳೀಯರ ಪ್ರಕಾರ, ಆ ಸ್ಥಳದಲ್ಲಿ ಹಲವು ವರ್ಷಗಳಿಂದ ಒಂದು ಪೂಜಾಸ್ಥಳ ಇತ್ತು. ಅಭಿವೃದ್ಧಿ ಕಾಮಗಾರಿಗಳಿಗಾಗಿ ಅಧಿಕಾರಿಗಳು ಅದನ್ನು ತೆರವುಗೊಳಿಸಿದ್ದರು. ಆದರೆ ಕೆಲ ಮುಸ್ಲಿಂ ಸಂಘಟನೆಗಳು, ಅಲ್ಲಿ ನಿರ್ಮಾಣಕ್ಕೆ ಮತ್ತೆ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ರಚನೆಯನ್ನು ತೆರವುಗೊಳಿಸಲು ಯತ್ನಿಸಿದರೆ, ಹಿಂದೂ ಸಂಘಟನೆಗಳು ಅದನ್ನು ಕಾಪಾಡಲು ಮುಂದಾದವು.

ಇದರಿಂದ ಉಭಯ ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆಯಿತು. ಬಳಿಕ ತಳ್ಳಾಟ-ಜಗಳ ಘರ್ಷಣೆಗೂ ಕಾರಣವಾಯಿತು.

ಭಟ್ಕಳ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ವಾಗ್ವಾದ ಮತ್ತಷ್ಟು ತೀವ್ರಗೊಂಡಿದ್ದು, ಶಾಂತಿ ಮಾತುಕತೆ ನಡೆಸಲು ಮುಂದಾದ ಒಬ್ಬ ಪೊಲೀಸ್ ಅಧಿಕಾರಿಯನ್ನು ಕೂಡ ಕೆಲವರು ತಳ್ಳಿದ ಘಟನೆ ನಡೆದಿದೆ. ಇದರಿಂದ ಆಕ್ರೋಶಗೊಂಡ ಪೊಲೀಸರು ಲಘು ಲಾಠಿಚಾರ್ಜ್ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಈ ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು, ಕೆಲ ಸ್ಥಳೀಯರು ಉದ್ದೇಶಪೂರ್ವಕವಾಗಿ ಪರಿಸ್ಥಿತಿಯನ್ನು ಉದ್ವಿಗ್ನಗೊಳಿಸಿ ಮುಸ್ಲಿಂ ಸಮುದಾಯವನ್ನು ತೃಪ್ತಿಪಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಹಿಂದೂ ಸಂಘಟನೆಗಳ ವಾದದ ಪ್ರಕಾರ, ದೇವರ ಕಟ್ಟೆ ಎಂದು ಕರೆಯಲಾಗುವ ವಿವಾದಿತ ಸ್ಥಳವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಗೆ ಪರಸ್ಪರ ಒಪ್ಪಿಗೆಯೊಂದಿಗೆ ತೆರವುಗೊಳಿಸಿತ್ತು. ರಸ್ತೆ ಅಗಲೀಕರಣ ಪೂರ್ಣವಾದ ಬಳಿಕ ಅದನ್ನು ರಸ್ತೆ ಬದಿಯಲ್ಲಿ ಮರುನಿರ್ಮಿಸುವುದಾಗಿ ಭರವಸೆ ನೀಡಲಾಗಿತ್ತು.

ಅವರು ನಮಗೆ ಭೂಮಿಯನ್ನೂ ಒದಗಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಈಗ ಸಣ್ಣ ದೇವಸ್ಥಾನವನ್ನು ನಿರ್ಮಿಸಲಾಗಿದೆ. ಆದರೆ ಮುಸ್ಲಿಂ ಸಂಘಟನೆಗಳು ಇದನ್ನು ವಿರೋಧಿಸುತ್ತಿವೆ. ಇದು ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವುದರಿಂದ ಅವರಿಗೆ ಇದರೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಪ್ರಸ್ತುತ ವಿವಾದಿತ ಸ್ಥಳದ ಬಳಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ, ಉದ್ವಿಗ್ನತೆ ಇನ್ನೂ ಮುಂದುವರಿದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.