ಪ್ರಧಾನಿ ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ ಪ್ರಕರಣ: ಆರು ಮಂದಿ ಪೊಲೀಸರ ಅಮಾನತು
ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಾತಗುಣಿ ಬಳಿ, ಪ್ರಧಾನಿ ಮೋದಿ ತೆರಳುವ ಮಾರ್ಗದ ಸ್ವಲ್ಪ ದೂರದಲ್ಲಿ, ತಪಾಸಣೆಯ ಸಮಯದಲ್ಲಿ ಸರ್ಕ್ಯೂಟ್ ಮತ್ತು ಟೈಮರ್ ಹೊಂದಿರುವ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು.

ಬೆಂಗಳೂರು: ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ನಗರದ ಹೊರವಲಯದಲ್ಲಿರುವ ಆರ್ಟ್ ಆಫ್ ಲಿವಿಂಗ್ ಕೇಂದ್ರಕ್ಕೆ ಭೇಟಿ ನೀಡುವುದಕ್ಕೂ ಮುನ್ನ ಆ ಮಾರ್ಗದಲ್ಲಿ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾದ ನಂತರ ಕರ್ತವ್ಯ ಲೋಪದ ಆರೋಪದ ಮೇಲೆ ಆರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಓರ್ವ ಸಬ್ ಇನ್ಸ್‌ಪೆಕ್ಟರ್, ಒರ್ವ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಾತಗುಣಿ ಬಳಿ, ಪ್ರಧಾನಿ ಮೋದಿ ತೆರಳುವ ಮಾರ್ಗದ ಸ್ವಲ್ಪ ದೂರದಲ್ಲಿ, ನಿಯಮಿತ ಭದ್ರತಾ ತಪಾಸಣೆಯ ಸಮಯದಲ್ಲಿ ಸರ್ಕ್ಯೂಟ್ ಮತ್ತು ಟೈಮರ್ ಹೊಂದಿರುವ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಾಹಿತಿಯ ನಂತರ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕಾರ್ಯಪ್ರವೃತ್ತವಾಗಿ ತನಿಖೆಯನ್ನು ಕೈಗೆತ್ತಿಕೊಂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



