Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು ಮೆಟ್ರೋ ಸಂಚಾರ ವ್ಯತ್ಯಯ!
ಮರದ ಕೊಂಬೆ ಬಿದ್ದು ಐಟಿಪಿಎಲ್–ಸತ್ಯಸಾಯಿ ಆಸ್ಪತ್ರೆ ಮಾರ್ಗದ ನಮ್ಮ ಮೆಟ್ರೋ ಸಂಚಾರ ಕೆಲಕಾಲ ಸ್ಥಗಿತವಾಗಿತ್ತು.

ಬೆಂಗಳೂರು: ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಹಲವು ಕಡೆ ಮಂಗಳವಾರ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೋರಮಂಗಲ, ಎಚ್.ಎಸ್.ಆರ್ ಲೇಔಟ್, ಬೆಳ್ಳಂದೂರು, ವರ್ತೂರು, ಸರ್ಜಾಪುರ, ವೈಟ್ ಫೀಲ್ಡ್, ಕೆ.ಆರ್.ಪುರಂ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.
ಭಾರೀ ಮಳೆಯಿಂದ ಹಲವು ಕಡೆ ಅವಾಂತರಗಳು ಸೃಷ್ಟಿಯಾಗಿದ್ದು, ಅದರಲ್ಲೂ ಮರದ ಕೊಂಬೆ ಬಿದ್ದು ಐಟಿಪಿಎಲ್ – ಸತ್ಯಸಾಯಿ ಆಸ್ಪತ್ರೆ ಮಾರ್ಗದ ನಮ್ಮ ಮೆಟ್ರೋ ಸಂಚಾರ ಕೆಲಕಾಲ ಸ್ಥಗಿತವಾಗಿತ್ತು. ಇದರಿಂದ ಮೆಟ್ರೋ ಸ್ಟೇಷನ್ಗಳಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿದ್ದು, ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಮನೆಗೆ ಹೋಗಲಾಗದೇ ಮೆಟ್ರೋ ನಿಲ್ದಾಣಗಳಲ್ಲೇ ಪರದಾಡುತ್ತಿದ್ದಾರೆ.
ಐಟಿಪಿಎಲ್ ಮತ್ತು ಸತ್ಯಸಾಯಿ ಆಸ್ಪತ್ರೆ ನಡುವೆ ಹಳಿಯ ಮೇಲೆ ಮರದ ಕೊಂಬೆ ಬಿದ್ದ ಕಾರಣ ವೈಟ್‌ಫೀಲ್ಡ್ ಮತ್ತು ಗರುಡಾಚಾರ್ ಪಾಳ್ಯ ನಡುವೆ ರೈಲು ಸಂಚಾರವನ್ನು ಸಂಜೆ 06:00 ಗಂಟೆಯಿಂದ 06:35 ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಈಗ ಎಂದಿನಂತೆ ವೈಟ್‌ಫೀಲ್ಡ್ ನಿಂದ ಚಲ್ಲಘಟ್ಟ ನಡುವೆ ರೈಲುಗಳು ಲಭ್ಯವಿದೆ. ಉಂಟಾದ ಅನಾನುಕೂಲತೆಗೆ ಬಿಎಂಆರ್‌ಸಿಎಲ್ ವಿಷಾದ ವ್ಯಕ್ತಪಡಿಸುತ್ತದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಕೆಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್
ಭಾರೀ ಮಳೆಯಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೆ ಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್ ಮಾಡಲಾಗಿದೆ. ಸಣ್ಣ ಮಳೆಗೂ ಕೆ ಆರ್ ಸರ್ಕಲ್ ಅಂಡರ್ ಪಾಸ್ ಜಲಾವೃತವಾಗುತ್ತೆ. ಹೀಗಾಗಿ ಪೊಲೀಸರು ಬ್ಯಾರಿಕೇಡ್ ಹಾಕಿ ಅಂಡರ್ ಪಾಸ್ ಬಂದ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



