Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು
ರೋಷನ್ ಐಟಿ ಕಂಪನಿಯ ಉದ್ಯೋಗಿಯಾಗಿದ್ದು, ಮೈಸೂರಿನಲ್ಲಿರುವ ತಮ್ಮ ಕುಟುಂಬದ ಕಾಫಿ ತೋಟವನ್ನೂ ನಿರ್ವಹಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರು: ಮೈಸೂರು ಜಿಲ್ಲೆಯ ಯಲಿವಾಳ ಬಳಿ ಸೋಮವಾರ ಸಂಜೆ ಸಿಡಿಲು ಬಡಿದು ಬೆಂಗಳೂರಿನ 43 ವರ್ಷದ ಟೆಕ್ಕಿಯೊಬ್ಬರು ಮೃತಪಟ್ಟಿದ್ದಾರೆ.
ಮೃತ ಟೆಕ್ಕಿಯನ್ನು ಹೊಸೊಕ್ಲು ರೋಷನ್ ಬಾಲಕೃಷ್ಣ ಎಂದು ಗುರುತಿಸಲಾಗಿದ್ದು, ಅವರು ಮೂಲತ ಕೊಡಗು ಜಿಲ್ಲೆಯವರು. ಆದರೆ ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು.
ರೋಷನ್ ಐಟಿ ಕಂಪನಿಯ ಉದ್ಯೋಗಿಯಾಗಿದ್ದು, ಮೈಸೂರಿನಲ್ಲಿರುವ ತಮ್ಮ ಕುಟುಂಬದ ಕಾಫಿ ತೋಟವನ್ನೂ ನೋಡಿಕೊಳ್ಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಸಂಜೆ 5 ಗಂಟೆಗೆ ರೋಷನ್ ಮತ್ತು ಅವರ ಕುಟುಂಬ ಯಲಿವಾಳ ಬಳಿ ತಮ್ಮ ತೋಟಕ್ಕೆ ಭೇಟಿ ನೀಡಿದಾಗ ಈ ಘಟನೆ ಸಂಭವಿಸಿದೆ. ರೋಷನ್ ಹಣ್ಣುಗಳನ್ನು ಕೀಳಲು ಮಾವಿನ ಮರದ ಬಳಿ ಹೋದಾಗ ಸಿಡಿಲು ಬಡಿದು ಸ್ಥಳದಲ್ಲೇ ಕುಸಿದು ಬಿದ್ದರು ಎಂದು ವರದಿಯಾಗಿದೆ.
ಕುಟುಂಬ ಸದಸ್ಯರು ತಕ್ಷಣ ಅವರನ್ನು ಹತ್ತಿರದ ಎನ್‌ಜಿ ಆಸ್ಪತ್ರೆಗೆ ಮತ್ತು ನಂತರ ಜಯದೇವ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ರೋಷನ್ ಅವರು, ಪತ್ನಿ ಹಾಗೂ 9ನೇ ತರಗತಿ ಓದುತ್ತಿರುವ ಓರ್ವ ಮಗನನ್ನು ಅಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



