KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್!
ಮೇ 24 ರಂದು ಬೆಂಗಳೂರಿನ ಹೊರವಲಯದಲ್ಲಿಎಸ್‌ಐಆರ್ ಪ್ರಕ್ರಿಯೆ, ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ, ಪಕ್ಷ ಸಂಘಟನೆ ಕುರಿತ ಪೂರ್ವಭಾವಿ ಸಭೆ ನಡೆದಿತ್ತು.

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಸಭೆಗೆ ಗೈರಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಪದಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ 3 ಉಪಾಧ್ಯಕ್ಷರು ಹಾಗೂ 29 ಪ್ರಧಾನ ಕಾರ್ಯದರ್ಶಿಗಳನ್ನು ಹುದ್ದೆಯಿಂದ ವಜಾಗೊಳಿಸಿದ್ದಾರೆ.
ಶಿಸ್ತು ಉಲ್ಲಂಘಿಸಿದ ಪದಾಧಿಕಾರಿಗಳನ್ನು ವಜಾಗೊಳಿಸಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಮೇ 24 ರಂದು ಬೆಂಗಳೂರಿನ ಹೊರವಲಯದಲ್ಲಿಎಸ್‌ಐಆರ್ ಪ್ರಕ್ರಿಯೆ, ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ, ಪಕ್ಷ ಸಂಘಟನೆ ಕುರಿತ ಪೂರ್ವಭಾವಿ ಸಭೆ ನಡೆದಿತ್ತು.
ಕೆಪಿಸಿಸಿ ಉಪಾಧ್ಯಕ್ಷರಾದ ಕೆ. ಶಿವಮೂರ್ತಿ (ದಾವಣಗೆರೆ), ಬಾಬುರಾವ್ ಜಗೀರ್ದಾರ್ (ಕಲಬುರಗಿ) ಮತ್ತು ಎಂಸಿ ವೇಣುಗೋಪಾಲ್ (ಬೆಂಗಳೂರು) ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ.


ಇನ್ನುಳಿದಂತೆ, ಪ್ರಧಾನ ಕಾರ್ಯದರ್ಶಿಗಳಾದ ಕೆಪಿಸಿಸಿ ವಕ್ತಾರ ತುಮಕೂರಿನ ನಿಕೇತ್ ರಾಜ್ ಮೌರ್ಯ, ನಟಿ ಭಾವನಾ ರಾಮಣ್ಣ, ಕೆಸಿ ಪ್ರಭಾಕರ್ ರೆಡ್ಡಿ, ತಿಬ್ಬೇಗೌಡ, ಜುಲ್ಫಿಕರ್ ಅಹ್ಮದ್, ಶಂಕರ್ ದೊಡ್ಡಿ, ರೇಖಾ ಹುಲಿಯಪ್ಪ, ಎಚ್ಎ ಷಣ್ಮುಗಪ್ಪ, ಎಂ ರಾಮಪ್ಪ, ಷಣ್ಮುಗಪ್ಪ ಶಿವಳ್ಳಿ, ಸಿಆರ್ ಮನೋಹರ್, ಎಚ್ಆರ್ ಶ್ರೀನಾಥ್, ನಾಗೇಶ್ವರ್ ರಾವ್ ಸೇರಿದಂತೆ 29 ಪ್ರಧಾನ ಕಾರ್ಯದರ್ಶಿಗಳಿಗೆ ಡಿಕೆ ಶಿವಕುಮಾರ್ ಗೇಟ್ ಪಾಸ್ ನೀಡಿದ್ದಾರೆ.
ಪಕ್ಷದ ಸಭೆಗೆ ಗೈರಾಗಿರುವ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸೂಚಿಸಿದ್ದರು. ಈ ಸೂಚನೆ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರು ಕ್ರಮ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



