ಚಿತ್ರದುರ್ಗ: ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದುರ್ಮರಣ
ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಅತಿ ವೇಗವಾಗಿ ಬಂದ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೊಲೆರೋ ವಾಹನದಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಗ್ರಾಮದ ಬಳಿ ರಸ್ತೆಬದಿ ನಿಂತಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ನಡೆದಿದೆ.
ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಅತಿ ವೇಗವಾಗಿ ಬಂದ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೊಲೆರೋ ವಾಹನದಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಬಳ್ಳಾರಿ ಮೂಲದ ವೆಂಕಟೇಶ್(28), ಶಿವಮ್ಮ(25), ಮೀನಾಕ್ಷಿ(16), ಪೂಜಾ(4) ಮತ್ತು ಪರುಶುರಾಮ(1.5) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



