ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವು
ಕಾರಿನ ಟೈರ್ ಸ್ಫೋಟಗೊಂಡ ಕಾರಣ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರುಲಹಳ್ಳಿ ಗೇಟ್ ಬಳಿ ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.
ಇಂದು ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನ ಟೈರ್ ಸ್ಫೋಟಗೊಂಡ ಕಾರಣ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.
ಮೃತರೆಲ್ಲರೂ ಚಳ್ಳಕೆರೆ ಪಟ್ಟಣದ ನಿವಾಸಿಗಳಾಗಿದ್ದು, ಅವರನ್ನು ಪ್ರಮೋದ್, ರಾಘವೇಂದ್ರ, ಮಲ್ಲಿಕಾರ್ಜುನ್, ಸೋಮ ಮತ್ತು ರುದ್ರೇಶ್ ಎಂದು ಗುರುತಿಸಲಾಗಿದೆ.
ಬಳ್ಳಾರಿಯಿಂದ ಚಳ್ಳಕೆರೆಗೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಅಪಘಾತ ಸ್ಥಳವನ್ನು ಪರಿಶೀಲಿಸಿದರು ಮತ್ತು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಈ ಸಂಬಂಧ ಮೊಳಕಾಲ್ಮೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



