ರಾಜ್ಯ

ಬೆಂಗಳೂರಿನಲ್ಲಿ ವರುಣಾರ್ಭಟ: ವಿಜಯನಗರ ಕ್ಲಬ್ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು; Video

ಇಂದು ಸಂಜೆ ಸುರಿದ ಭಾರೀ ಮಳೆಗೆ ವಿಜಯನಗರದಲ್ಲಿ ಕ್ಲಬ್ ಕಾಂಪೌಂಡ್ ಗೋಡೆ ಕುಸಿದು ಓರ್ವ ಆಟೋ ಚಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ವರುಣಾರ್ಭಟ: ವಿಜಯನಗರ ಕ್ಲಬ್ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು; Video
ಕ್ಲಬ್ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು
Published On :

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಡೆ ಶುಕ್ರವಾರ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ ದುರಂತ ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ದುರಂತ ಸಂಭವಿಸಿದೆ.

ಇಂದು ಸಂಜೆ ಸುರಿದ ಭಾರೀ ಮಳೆಗೆ ವಿಜಯನಗರದಲ್ಲಿ ಕ್ಲಬ್ ಕಾಂಪೌಂಡ್ ಗೋಡೆ ಕುಸಿದು ಓರ್ವ ಆಟೋ ಚಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮೃತ ಆಟೋ ಚಾಲಕನನ್ನು ಗಂಗೊಂಡನಹಳ್ಳಿಯ ನಿವಾಸಿ ಶಿವಬೋರಯ್ಯ(46) ಎಂದು ಗುರುತಿಸಲಾಗಿದೆ. ಸದ್ಯ ಶಿವಬೋರಯ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಘಟನಾ ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರದ ಹಲವೆಡೆ ಭಾರೀ ಮಳೆ

ಇಂದು ಸಂಜೆ 6 ಗಂಟೆ ಸುಮಾರಿಗೆ ವಿಧಾನಸೌಧ, ಶಿವಾಜಿನಗರ, ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ವಿಜಯನಗರ, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೋರಮಂಗಲ, ಎಚ್.ಎಸ್.ಆರ್ ಲೇಔಟ್ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.

ಭಾರೀ ಮಳೆಯಿಂದ ಅಂಡರ್ ಪಾಸ್ ಜಲಾವೃತ ಸೇರಿದಂತೆ ಸಾಲು ಸಾಲು ಮರಗಳು ಧರೆಗುರುಳಿದ್ದು, ಹಲವು ಕಡೆ ಅವಾಂತರಗಳು ಸೃಷ್ಟಿಯಾಗಿವೆ. ಈ ಮಧ್ಯೆ ಬಲಿ ಕೂಡ ಪಡೆದಿದೆ. ವಿಜಯನಗರ ಕ್ಲಬ್‌ ಕಾಂಪೌಂಡ್ ಪಕ್ಕದಲ್ಲೇ ನಿಲ್ಲಿಸಿದ್ದ ಆಟೋ ಮೇಲೆ ಕಾಂಪೌಂಡ್ ಕುಸಿದು ಬಿದ್ದು ಆಟೋ ಚಾಲಕ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.