ಮುಂದಿನ KPCC ಅಧ್ಯಕ್ಷ: ವದಂತಿ ತಳ್ಳಿಹಾಕಿದ ಸಚಿವ ಸತೀಶ್ ಜಾರಕಿಹೊಳಿ! ಹೇಳಿದ್ದೇನು? Video
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ನಂತರ ಪಕ್ಷದ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮುಂದಿನ ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ಇಂತಹ ಊಹಾಪೋಹಗಳನ್ನು ಅವರು ತಳ್ಳಿಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಿ, ದೆಹಲಿಯಿಂದ ಹಿಂದಿರುಗಿದ ನಂತರವೇ ಅಂತಿಮ ನಿರ್ಧಾರ ಹೊರಬೀಳಲಿದೆ ಎಂದು ಅವರು ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ನಂತರ ಪಕ್ಷದ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ದೆಹಲಿಗೆ ಹೋಗಿದ್ದಾರೆ. ಅವರು ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ. ಅವರು ಏನೇ ನಿರ್ಧಾರ ತೆಗೆದುಕೊಂಡರೂ ನಾವು ಸ್ವೀಕರಿಸುತ್ತೇವೆ. ಸಿದ್ದರಾಮ್ಯ ದೆಹಲಿಯಿಂದ ವಾಪಾಸ್ಸಾದ ನಂತರ ಸೋನಿಯಾ ಮತ್ತು ರಾಹುಲ್ ಗಾಂಧಿ ಜೊತೆಗಿನ ಮಾತುಕತೆಯ ಸಮಯದಲ್ಲಿ ಏನಾಯಿತು ಎಂಬುದರ ಕುರಿತು ನಾವು ಚರ್ಚಿಸುತ್ತೇವೆ ಮತ್ತು ನಂತರ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ" ಎಂದು ಜಾರಕಿಹೊಳಿ ಹೇಳಿದರು.
ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸಂಪುಟ ರಚನೆಯ ಕುರಿತು ಚರ್ಚೆಗಳು ಇನ್ನೂ ಆರಂಭವಾಗಿಲ್ಲ ಎಂದು ಹೇಳಿದರು. ನಾನು ಸ್ವತಃ ಆಕಾಂಕ್ಷಿಯಲ್ಲ. ಚರ್ಚೆಗಳು ಇನ್ನೂ ಆರಂಭವಾಗಿಲ್ಲ. ಚರ್ಚೆಗಳು ನಡೆದಾಗ, ಈ ವಿಷಯದ ಬಗ್ಗೆ ನಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತೇವೆ ಎಂದು ಅವರು ತಿಳಿಸಿದರು. ಹೊಸ ಸರ್ಕಾರದ ಸಂಭಾವ್ಯ ಸಂಪುಟ ರಚನೆ, ಉಪಮುಖ್ಯಮಂತ್ರಿಗಳ ಸಂಖ್ಯೆಯ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಶನಿವಾರ ಸಂಜೆಯ ವೇಳೆಗೆ ಚಿತ್ರಣ ಸ್ಪಷ್ಟವಾಗುತ್ತದೆ ಎಂದು ಜಾರಕಿಹೊಳಿ ಹೇಳಿದರು.
ಎಷ್ಟು ಡಿಸಿಎಂ ನೇಮಿಸಲಾಗುತ್ತದೆಯೋ ಇಲ್ಲವೋ ಎಂಬುದು ನನಗೆ ತಿಳಿದಿಲ್ಲ. ನಾಳೆ ಸಂಜೆಯ ವೇಳೆಗೆ ಎಲ್ಲವೂ ಸಂಪೂರ್ಣವಾಗಿ ಸ್ಪಷ್ಟವಾಗುತ್ತದೆ. ಸಿದ್ಧತೆಗಳು ಸರಳವಾಗಿರುತ್ತವೆ, ಅದರಲ್ಲಿ ಪ್ರಮುಖವಾದದ್ದೇನೂ ಇಲ್ಲ. ಸೋಮವಾರದೊಳಗೆ ಅದು ಪೂರ್ಣಗೊಳ್ಳುವ ಸಾಧ್ಯತೆಯಿದೆ. ಸೋಮವಾರ ಅಥವಾ ಮಂಗಳವಾರದೊಳಗೆ ಅದನ್ನು ಅಂತಿಮಗೊಳಿಸಲಾಗುವುದು ಎಂದು ನಾವು ಕೇಳಿದ್ದೇವೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



