ತುಮಕೂರು: ಮಾಜಿ ಸಚಿವ ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ
ವೆಂಕಟರಮಣಪ್ಪ ಅವರು 2008ರ ಅವಧಿಯಲ್ಲಿ ರೇಷ್ಮೆ ಮತ್ತು ಸಣ್ಣ ಕೈಗಾರಿಕಾ ಸಚಿವರಾಗಿ, 2018ರಲ್ಲಿ ಕಾರ್ಮಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಒಟ್ಟು 4 ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು.

ಪಾವಗಡ: ಮಾಜಿ ಸಚಿವ ವೆಂಕಟರಮಣಪ್ಪ(85) ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಕೆಲ ದಿನಗಳಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾ ಗಿದ್ದರು.
ವೆಂಕಟರಮಣಪ್ಪ ಅವರು 2008ರ ಅವಧಿಯಲ್ಲಿ ರೇಷ್ಮೆ ಮತ್ತು ಸಣ್ಣ ಕೈಗಾರಿಕಾ ಸಚಿವರಾಗಿ, 2018ರಲ್ಲಿ ಕಾರ್ಮಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಒಟ್ಟು 4 ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



