ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಇಡೀ ಕಟ್ಟಡ! Video
ಇಂದು ಬೆಳಗ್ಗೆ 9.30 ರ ಸುಮಾರಿಗೆ ನಾಗದೇವನಹಳ್ಳಿಯ ಖಾಸಗಿ ಶಾಲೆಯೊಂದರಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಕಟ್ಟಡ ಹೊತ್ತಿ ಉರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ 9.30 ರ ಸುಮಾರಿಗೆ ನಾಗದೇವನಹಳ್ಳಿಯ ಖಾಸಗಿ ಶಾಲೆಯೊಂದರಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯಲ್ಲಿ ಯಾವುದೇ ಗಾಯಗಳು ಅಥವಾ ಸಾವುನೋವುಗಳು ವರದಿಯಾಗಿಲ್ಲ. ಬೆಂಕಿಯನ್ನು ನಂದಿಸಲು ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಲೆಯ ನಾಲ್ಕನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಅದು ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ದಟ್ಟವಾದ ಹೊಗೆ ಇಡೀ ಕಟ್ಟಡವನ್ನು ಆವರಿಸಿತು.
ಶನಿವಾರವಾಗಿದ್ದರಿಂದ, ಶಾಲೆಯ ನಿಯಮಿತ ತರಗತಿಗಳಿಗೆ ರಜೆ ನೀಡಲಾಗಿತ್ತು. ಆದಾಗ್ಯೂ, ಕೆಲವು ವಿದ್ಯಾರ್ಥಿಗಳು ಓರಿಯಂಟೇಶನ್ ಸೆಷನ್‌ಗೆ ಹಾಜರಾಗಲು ಬಂದಿದ್ದರು. ಶಾಲಾ ಸಿಬ್ಬಂದಿ ಜೊತೆಗೆ ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ನಿಖರವಾದ ಕಾರಣವನ್ನು ಕಂಡುಹಿಡಿಯಲು ವಿವರವಾದ ತನಿಖೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



