ರಾಜ್ಯ

ಸಿದ್ದರಾಮಯ್ಯ ರಾಜಮನೆತನಕ್ಕೆ ಹತ್ತಿರವೂ ಇಲ್ಲ, ದೂರವೂ ಇಲ್ಲ: ಪ್ರಮೋದಾದೇವಿ ಒಡೆಯರ್

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಇಳಿದರೆಂದು ಅಭಿವೃದ್ಧಿ ಕುಂಠಿತಗೊಳ್ಳಲು ಸಾಧ್ಯವಿಲ್ಲ. ಹಾಗೇನಾದರೂ ಆದಲ್ಲಿ, ನಿರ್ಲಕ್ಷ್ಯ ವಹಿಸಿದಲ್ಲಿ ಜನರು ಒತ್ತಡ ಹಾಕಿ ಕೆಲಸ ಮಾಡಿಸಿಕೊಳ್ಳಬೇಕು.

ಸಿದ್ದರಾಮಯ್ಯ ರಾಜಮನೆತನಕ್ಕೆ ಹತ್ತಿರವೂ ಇಲ್ಲ, ದೂರವೂ ಇಲ್ಲ: ಪ್ರಮೋದಾದೇವಿ ಒಡೆಯರ್
ಪ್ರಮೋದಾ ದೇವಿ ಒಡೆಯರ್
Published On :

ಮೈಸೂರು: ಸಿದ್ದರಾಮಯ್ಯ ಅವರ ವಿರುದ್ಧ ಯಾವುದೇ ದ್ವೇಷವಿಲ್ಲ. ಅವರು ರಾಜಮನೆತನಕ್ಕೆ ಹತ್ತಿರವೂ ಇಲ್ಲ, ದೂರವೂ ಇಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಬೆಳವಣಿಗೆಗಳನ್ನು ಕುರಿತು ನಾನು ಮಾತನಾಡುವುದಿಲ್ಲ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಇಳಿದರೆಂದು ಅಭಿವೃದ್ಧಿ ಕುಂಠಿತಗೊಳ್ಳಲು ಸಾಧ್ಯವಿಲ್ಲ. ಹಾಗೇನಾದರೂ ಆದಲ್ಲಿ, ನಿರ್ಲಕ್ಷ್ಯ ವಹಿಸಿದಲ್ಲಿ ಜನರು ಒತ್ತಡ ಹಾಕಿ ಕೆಲಸ ಮಾಡಿಸಿಕೊಳ್ಳಬೇಕು’ ಎಂದು ಹೇಳಿದರು.

ನೂತನ ಮುಖ್ಯಮಂತ್ರಿ ಯಾರೇ ಆದರೂ ಅವರಿಗೆ ಆಡಳಿತ ಹಿಡಿತಕ್ಕೆ ಬರಲು, ಅಭಿವೃದ್ಧಿ ಕಾರ್ಯ ನಡೆಯಲು ಮೂರ್ನಾಲ್ಕು ತಿಂಗಳಾದರೂ ಸಮಯಾವಕಾಶ ಬೇಕು. ಮೈಸೂರಿಗೆ ಈಗ ಮಂಜೂರಾದ ಯೋಜನೆಗಳನ್ನು ಅವರು ಮುಂದುವರಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.