ಬಿಟ್ ಕಾಯಿನ್ ಬಹುಕೋಟಿ ಹಗರಣ ಕೇಸ್: ನಲಪಾಡ್ ಗೆ ಮತ್ತೆ ಸಂಕಷ್ಟ; ವಿಚಾರಣೆಗೆ ಹಾಜರಾಗಲು ED ಸಮನ್ಸ್
ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದ್ದು, ನಾಳೆ (ಜೂ.1) ಸೋಮವಾರದಂದೇ ವಿಚಾರಣೆ ಹಾಜರಾಗುವಂತೆ ಸೂಚಿಸಿದೆ.

ಬೆಂಗಳೂರು: ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.
ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದ್ದು, ನಾಳೆ (ಜೂ.1) ಸೋಮವಾರದಂದೇ ವಿಚಾರಣೆ ಹಾಜರಾಗುವಂತೆ ಸೂಚಿಸಿದೆ. ಶ್ರೀಕಿ, ನಲಪಾಡ್ ಮನೆ ಮೇಲೆ ದಾಳಿ ನಡೆಸಿದ್ದ ಇಡಿ ಪರಿಶೀಲನೆ ನಡೆಸಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ ಇಡಿ ಅಧಿಕಾರಿಗಳು ಶ್ರೀಕಿ, ಸುನೇಶ್ ಹೆಗ್ಡೆ, ರಾಬಿನ್ ಖಂಡೇವಾಲ ಅವರನ್ನ ಬಂಧಿಸಿದೆ.
ಬಿಟ್ ಕಾಯಿನ್ ಕೇಸ್ ಸಂಬಂದ ಕೈ ನಾಯಕ ಮೊಹಮ್ಮದ್ ನಲಪಾಡ್ ಅವರಿಗೆ ಇಡಿ ಎರಡನೇ ಬಾರಿ ನೋಟಿಸ್ ನೀಡಿದೆ. ರಾಜಕೀಯ ಕಾರ್ಯಕ್ರಮ ಹಿನ್ನೆಲೆ ಮೊದಲ ನೋಟಿಸ್ಗೆ ನಲಪಾಡ್ ಹಾಜರಾಗಿರಲಿಲ್ಲ. ಕಾರಣ ತಿಳಿಸಿ ಇಡಿಗೆ ಮನವಿ ಮಾಡಿದ್ದರು. ಇದೀಗ ಎರಡನೇ ಬಾರಿ ಇಡಿ ನೋಟಿಸ್ ಜಾರಿ ಮಾಡಿದ್ದುಮ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಇತ್ತೀಚೆಗಷ್ಟೇ ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಬೆಂಗಳೂರಿನ ಅಶೋಕನಗರದಲ್ಲಿರುವ ನಲಪಾಡ್ ಮನೆ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಸತತ 21 ಗಂಟೆಗಳ ಶೋಧ ಕಾರ್ಯ ನಡೆಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



