ಹಾಸನ: ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಉಪ ತಹಶೀಲ್ದಾರ್ ಆತ್ಮಹತ್ಯೆ
ತಿಮ್ಮಯ್ಯ (52) ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್. ಮೈಸೂರು ಜಿಲ್ಲೆ, ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದರು.

ಹಾಸನ: ನೇಣುಬಿಗಿದುಕೊಂಡು ಉಪತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ನಡೆದಿದೆ.
ತಿಮ್ಮಯ್ಯ (52) ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್. ಮೈಸೂರು ಜಿಲ್ಲೆ, ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ ತಿಮ್ಮಯ್ಯ,
ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮೇ 30 ಲಾಡ್ಜ್‌ನಲ್ಲಿ 4 ಪುಟದ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬಸ್ಥರೊಂದಿಗೆ ವಾಸವಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



