ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್ಗೆ ಬಿತ್ತು ₹89 ಕೋಟಿ ದಂಡ!
ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ಗೆ ಸಂಬಂಧಿಸಿದಂತೆ ಕಸ್ಟಮ್ ಇಲಾಖೆ ಬರೋಬ್ಬರಿ 89 ಕೋಟಿ ದಂಡ ವಿಧಿಸಿದೆ. 399 ಪುಟಗಳ ಆದೇಶ ಹೊರಬಂದಿದ್ದು, ಒಂದು ವರ್ಷದ ಅವಧಿಯಲ್ಲಿ 113 ಕೆಜಿ ಚಿನ್ನ ಸಾಗಾಟ ಸಾಬೀತಾಗಿದೆ.

ಬೆಂಗಳೂರು: ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನ ಆರೋಪಿ ಆಗಿದ್ದಾರೆ. ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಕ್ರಮವಾಗಿ ಸುಮಾರು 14.8 ಕೆಜಿ ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪ ಹೊತ್ತಿರುವ ರನ್ಯಾ ರಾವ್ ಅವರಿಗೆ ಕಸ್ಟಮ್ ಇಲಾಖೆ ಭಾರೀ ದಂಡ ವಿಧಿಸಿದೆ.
ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ಗೆ ಸಂಬಂಧಿಸಿದಂತೆ ಕಸ್ಟಮ್ ಇಲಾಖೆ ಬರೋಬ್ಬರಿ 89 ಕೋಟಿ ದಂಡ ವಿಧಿಸಿದೆ. 399 ಪುಟಗಳ ಆದೇಶ ಹೊರಬಂದಿದ್ದು, ಒಂದು ವರ್ಷದ ಅವಧಿಯಲ್ಲಿ 113 ಕೆಜಿ ಚಿನ್ನ ಸಾಗಾಟ ಸಾಬೀತಾಗಿದೆ.
ಕಸ್ಟಮ್ಸ್ ಜಂಟಿ ನಿರ್ದೇಶಕ ಸಂದೀಪ್ ಅವರು ಹೊರಡಿಸಿರುವ 399 ಪುಟಗಳ ಸುದೀರ್ಘ ಆದೇಶದಲ್ಲಿ ನಟಿ ರನ್ಯಾರಾವ್ ಅಂತರರಾಷ್ಟ್ರೀಯ ಮಟ್ಟದ ಗೋಲ್ಡ್ ಸ್ಮಗ್ಲಿಂಗ್ ಜಾಲದಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿರುವುದನ್ನು ಸಾಕ್ಷಿ ಸಮೇತ ಸಾಬೀತು ಪಡಿಸಲಾಗಿದೆ. ದಂಡದ ಮೊತ್ತ ಹಾಗೂ ಆದೇಶದ ಅಧಿಕೃತ ಪ್ರತಿಯನ್ನು ಕಸ್ಟಮ್ಸ್ ಇಲಾಖೆ ಈಗಾಗಲೇ ರನ್ಯಾರಾವ್‌ಗೆ ಕಳುಹಿಸಿದೆ.
ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ನಟಿ ರನ್ಯಾ ಬಂಧಿಸಿ ನಡೆಸಿದ ತೀವ್ರ ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಮಾಹಿತಿ ಹೊರಬಿದ್ದಿದೆ. ಮಾರ್ಚ್ 7, 2024 ಮತ್ತು ಫೆಬ್ರವರಿ 2, 2025ರ ನಡುವಿನ ಕೇವಲ ಒಂದು ವರ್ಷದ ಅವಧಿಯಲ್ಲಿ ಈ ದಂಧೆ ನಡೆದಿದೆ. ದುಬೈನಿಂದ ಭಾರತಕ್ಕೆ ಬರೋಬ್ಬರಿ 113 ಕೆ.ಜಿ. ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿರುವುದು ತನಿಖೆಯಲ್ಲಿ ಸ್ಪಷ್ಟವಾಗಿ ಸಾಬೀತಾಗಿದೆ.
ನಟಿ ರನ್ಯಾರಾವ್ ತನ್ನ ಸಹ ಆರೋಪಿಗಳಾದ ತರುಣ್ ಸೇರಿದಂತೆ ಇತರ ಮೂವರ ಜೊತೆಗೂಡಿ ಈ ಬೃಹತ್ ಚಿನ್ನದ ಕಳ್ಳಸಾಗಣೆ ವಹಿವಾಟು ನಡೆಸಿದ್ದು ಬಯಲಾಗಿದೆ. ಈ ಹಿಂದೆ ಹಿಂದೆ ಡಿಆರ್‌ಐ ಅಧಿಕಾರಿಗಳು ರನ್ಯಾರಾವ್ ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ 2.5 ಕೋಟಿ ರೂ. ನಗದು ಮತ್ತು 2.06 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿದ್ದವು.
ತರುಣ್ ಸೇರಿ ಇನ್ನುಳಿದ ಮೂವರ ಬಳಿ ಚಿನ್ನದ ವ್ಯವಹಾರ ಹೊಂದಿದ್ದ ರನ್ಯಾ ರಾವ್ಗೆ ಕಸ್ಟಮ್ಸ್ ಇಲಾಖೆ 89 ಕೋಟಿ ದಂಡ ವಿಧಿಸಿದ್ದು, ಈ ಸಂಬಂಧ ಕಸ್ಟಮ್ಸ್ ಜಂಟಿ ನಿರ್ದೇಶಕ ಸಂದೀಪ್ ಅವರು ಆದೇಶ ಹೊರಡಿಸಿದ್ದಾರೆ. ದಂಡದ ಮಾಹಿತಿ ಬಗ್ಗೆ ರನ್ಯಾರಾವ್‌ಗೆ ಪತ್ರದ ಮೂಲಕ ಮಾಹಿತಿ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



