ಸರ್ಕಾರ ರೈತರನ್ನು ಭಿಕ್ಷುಕರಂತೆ ಕಾಣುತ್ತಿದೆ: ಆರ್ ಅಶೋಕ್; Video
ಕಾಂಗ್ರೆಸ್‌ನ ‘ಭಾರತ್ ಜೋಡೋ’ ಸಂಘಟನೆಗಳಂತಹ ‘ಗಂಜಿ ಕೇಂದ್ರ’ಗಳಿಗೆ 2,500 ಕೋಟಿ ಮೀಸಲಿಡುತ್ತಿದ್ದೀರಿ. ಆದರೆ ರೈತರಿಗೆ ಕೇವಲ 1,000 ಕೋಟಿ ನೀಡುತ್ತಿದ್ದೀರಿ. ರೈತರ ಬಗ್ಗೆ ಸರ್ಕಾರಕ್ಕಿರುವ ಆದ್ಯತೆ ಇದರಿಂದಲೇ ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ರಾಜ್ಯ ಸರ್ಕಾರ ರೈತರಿಗೆ ಘೋಷಿಸಿರುವ ತಲಾ 2,500 ರೂಪಾಯಿ ಪರಿಹಾರ ಯಾವುದಕ್ಕೂ ಸಾಕಾಗುವುದಿಲ್ಲ. ಸರ್ಕಾರ ರೈತರನ್ನು ಭಿಕ್ಷುಕರಂತೆ ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ನ ‘ಭಾರತ್ ಜೋಡೋ’ ಸಂಘಟನೆಗಳಂತಹ ‘ಗಂಜಿ ಕೇಂದ್ರ’ಗಳಿಗೆ 2,500 ಕೋಟಿ ಮೀಸಲಿಡುತ್ತಿದ್ದೀರಿ. ಆದರೆ ರೈತರಿಗೆ ಕೇವಲ 1,000 ಕೋಟಿ ನೀಡುತ್ತಿದ್ದೀರಿ. ರೈತರ ಬಗ್ಗೆ ಸರ್ಕಾರಕ್ಕಿರುವ ಆದ್ಯತೆ ಇದರಿಂದಲೇ ಸ್ಪಷ್ಟವಾಗುತ್ತದೆ ಎಂದು ಹೇಳಿದರು.
ಹುಬ್ಬಳ್ಳಿಯಲ್ಲಿ ರೈತರ ಪ್ರತಿಭಟನೆ ವೇಳೆ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಮಾಡಲಾದ ಅವಹೇಳನಕಾರಿ ಹೇಳಿಕೆಗಳ ಕುರಿತು ಮಾತನಾಡಿದ ಅವರು, ಒಬ್ಬ ಸ್ವಾಮೀಜಿ ಪ್ರಹ್ಲಾದ್ ಜೋಶಿ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು.
ಪ್ರಹ್ಲಾದ್ ಜೋಶಿ ಅವರ ಕುಟುಂಬ ಸದಸ್ಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಸ್ವಾಮಿಗಳು ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದುಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



