ರಾಜ್ಯ

Ration Card e-KYCಗಾಗಿ ಇನ್ಮುಂದೆ ಕ್ಯೂ ನಿಲ್ಲಬೇಕಿಲ್ಲ: ಬಂತು ಹೊಸ Anna Seve ಆ್ಯಪ್!

ರಾಜ್ಯದ ರೇಷನ್ ಕಾರ್ಡ್ ಬಳಕೆದಾರರು ಇ-ಕೆವೈಸಿ ಪ್ರಕ್ರಿಯೆಗಾಗಿ ಇನ್ಮುಂದೆ ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಆಹಾರ ಇಲಾಖೆಯು ಅನ್ನ ಸೇವೆ ಎಂಬ ನೂತನ ಮೊಬೈಲ್ ಆ್ಯಪ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಆ ಕುರಿತ ವರದಿ ಇಲ್ಲಿದೆ:

Ration Card e-KYCಗಾಗಿ ಇನ್ಮುಂದೆ ಕ್ಯೂ ನಿಲ್ಲಬೇಕಿಲ್ಲ: ಬಂತು ಹೊಸ Anna Seve ಆ್ಯಪ್!
Ration Card e-KYCಗಾಗಿ ಬಂತು ಹೊಸ ಅನ್ನ ಸೇವೆ ಆ್ಯಪ್! — AI Image
Published On :

ಬೆಂಗಳೂರು: ರಾಜ್ಯದ ರೇಷನ್ ಕಾರ್ಡ್ ಬಳಕೆದಾರರು ಇ-ಕೆವೈಸಿ ಪ್ರಕ್ರಿಯೆಗಾಗಿ ಇನ್ಮುಂದೆ ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಕರ್ನಾಟಕ ಆಹಾರ ಇಲಾಖೆಯು 'ಅನ್ನ ಸೇವೆ' (Anna Seve) ಎಂಬ ನೂತನ ಮೊಬೈಲ್ ಆ್ಯಪ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಅವರು ಈ ನೂತನ ತಾಂತ್ರಿಕ ಆ್ಯಪ್‌ಗೆ ಚಾಲನೆ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಹೊಸ ವ್ಯವಸ್ಥೆಯಿಂದ ಲಾಭವೇನು?

  • ಮನೆಯಲ್ಲೇ ಕುಳಿತು ಇ-ಕೆವೈಸಿ: ಸ್ಮಾರ್ಟ್‌ಫೋನ್ ಹೊಂದಿರುವ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳು ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಅಲೆಯುವ ತಾಪತ್ರಯವಿಲ್ಲದೆ, ತಮ್ಮ ಮೊಬೈಲ್ ಮೂಲಕವೇ ಕುಟುಂಬದ ಸದಸ್ಯರ ಇ-ಕೆವೈಸಿ ಪ್ರಕ್ರಿಯೆಯನ್ನು ಸುಲಭವಾಗಿ ಪೂರ್ಣಗೊಳಿಸಬಹುದು.

  • ಮುಖ ಚಹರೆ ಗುರುತು: ಹೆಬ್ಬೆರಳ ಗುರುತು (ಬೆರಳಚ್ಚು) ಮೂಡದ ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ಈ ಆ್ಯಪ್‌ನಲ್ಲಿ ಫೇಸ್ ಅಥೆಂಟಿಕೇಶನ್ (Face Authentication) ತಂತ್ರಜ್ಞಾನದ ಮೂಲಕ ಮುಖದ ಚಹರೆ ಗುರುತಿಸಿ ಇ-ಕೆವೈಸಿ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಲಭ್ಯ

ಮೊದಲ ಹಂತದಲ್ಲಿ ಈ ಸೇವೆಯನ್ನು ರಾಜ್ಯದ 8 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಈ ಜಿಲ್ಲೆಗಳ ಸುಮಾರು 4.5 ಕೋಟಿ ಫಲಾನುಭವಿಗಳು ಇದರ ಲಾಭ ಪಡೆಯಬಹುದು. ಆ ಜಿಲ್ಲೆಗಳೆಂದರೆ: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಉಡುಪಿ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಬೀದರ್, ಕೊಪ್ಪಳ. ಅದರಂತೆ, ಈ ಪೈಲಟ್ ಯೋಜನೆ ಯಶಸ್ವಿಯಾದ ನಂತರ ಉಳಿದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.