ಕುಮಟಾ ಬಳಿ ದೇವಿಮನೆ ಘಾಟ್‌ನಲ್ಲಿ ಹಳ್ಳಕ್ಕೆ ಬಿದ್ದ KSRTC ಬಸ್; ಮಹಿಳೆ ಸಾವು, ಹಲವು ಮಂದಿ ಗಾಯ
ಬಾಗಲಕೋಟೆಯಿಂದ ಶಿರಸಿ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಕುಮಟಾ: ಕುಮಟಾ ತಾಲೂಕಿನ ದೇವಿಮನೆ ಘಾಟ್‌ನ ಮಸ್ತಿ ಹಳ್ಳ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ಹಳ್ಳಕ್ಕೆ ಉರುಳಿದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
ಬಾಗಲಕೋಟೆಯಿಂದ ಶಿರಸಿ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಘಟನೆ ಬಳಿಕ ಕುಮಟಾ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾದರು.
ಘಟನೆಯಲ್ಲಿ 40 ವರ್ಷದ ಮಹಿಳೆ ಭಟ್ಕಳದ ಪರ್ವಿನ್ ಮೃತಪಟ್ಟಿದ್ದಾರೆ.
ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಗಾಯಗೊಂಡ ಪ್ರಯಾಣಿಕರನ್ನು ಕೂಡಲೇ ಕುಮಟಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಎಲ್ಲರಿಗೂ ಅಗತ್ಯ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಮಟಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಸ್ ಕಂದಕಕ್ಕೆ ಉರುಳಿದ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ದೇವಿಮನೆ ಘಟ್ಟದಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಆದರೆ ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ತನಿಖೆಯಿಂದ ತಿಳಿಯಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



