ಮೈಸೂರು: ಕುಸಿದು ಬಿದ್ದ ದೀಪಾಲಂಕಾರದ ಬೃಹತ್ ಕಟೌಟ್; ವಿದ್ಯಾರ್ಥಿಗಳು ಪಾರು; ದಸರಾ ಆರಂಭದಲ್ಲೇ ತಪ್ಪಿದ ದೊಡ್ಡ ದುರಂತ!
ಈ ಮಧ್ಯೆ ಶನಿವಾರ ಅರಮನೆ ಬಳಿ ಅಳವಡಿಸಿದ್ದ ದೀಪಾಲಂಕಾರದ ಬೃಹತ್ ಕಟೌಟ್ ವೊಂದು ದಿಢೀರ್ ಕುಸಿದು ಬಿದ್ದಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಸಾಂಸ್ಕೃತಿಕ ನಗರಿಯಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ.
ಈ ಮಧ್ಯೆ ಶನಿವಾರ ಅರಮನೆ ಬಳಿ ಅಳವಡಿಸಿದ್ದ ದೀಪಾಲಂಕಾರದ ಬೃಹತ್ ಕಟೌಟ್ ವೊಂದು ದಿಢೀರ್ ಕುಸಿದು ಬಿದ್ದಿದೆ. ದಸರಾ ಆರಂಭಕ್ಕೂ ಮುನ್ನವೇ ಅಪಶಕುನವೆಂಬಂತೆ ದೀಪಾಲಂಕಾರದ ಕಟೌಟ್ ಮುರಿದುಬಿದ್ದಿದ್ದು, ದೊಡ್ಡ ಅನಾಹುತವೊಂದು ತಪ್ಪಿದೆ.
ಅರಮನೆ ಮುಂಭಾಗದ ಜೆಎಸ್‌ಎಸ್ ಮಹಾವಿದ್ಯಾಪೀಠದ ಸರ್ಕಲ್ ಬಳಿ ವಿದ್ಯುತ್ ದೀಪಾಲಂಕಾರದ ಕಟೌಟ್ ದಿಢೀರ್ ಟಿಟಿ ವಾಹನದ ಮೇಲೆ ಕುಸಿದುಬಿದ್ದಿದೆ. ಅದೃಷ್ಟವಶಾತ್ ಈ ಸಮಯದಲ್ಲಿ ಟಿಟಿ ವಾಹನದಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ಅರಮನೆ ವೀಕ್ಷಣೆಗೆ ತೆರಳಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ.
ಕಟೌಟ್ ಬಿದ್ದ ರಭಸಕ್ಕೆ ಟಿಟಿ ವಾಹನ ಜಖಂಗೊಂಡಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಅಧಿಕಾರಿಗಳು ಕುಸಿದ ಬಿದ್ದ ಕಟೌಟ್ ತೆರವುಗೊಳಿಸಿದ್ದು, ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



