ರಾಜ್ಯ

ಬೀದರ್​​: Pak ಉಗ್ರನ ಜತೆ ಸಂಪರ್ಕ ಶಂಕೆ; ಬೀದರ್​ ಯುವಕನ ಬಂಧಿಸಿದ NIA!

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಬೀದರ್ ಪೊಲೀಸರ ಸಹಕಾರದೊಂದಿಗೆ ಪಾಕಿಸ್ತಾನ ಮೂಲದ ಘೋಷಿತ ಉಗ್ರ ಶಹಜಾದ್ ಭಟ್ಟಿ ಆ್ಯಂಡ್​ ಇತರರೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆ ಬೀದರ್ ನ ಭಾಲ್ಕಿ ತಾಲೂಕಿನ ಯಣಕೂರ ಗ್ರಾಮದ ವಿಶಾಲ್ ಮೇತ್ರೆ ಎಂಬಾತನನ್ನು ಬಂಧಿಸಲಾಗಿದೆ.

ಬೀದರ್​​: Pak ಉಗ್ರನ ಜತೆ ಸಂಪರ್ಕ ಶಂಕೆ; ಬೀದರ್​ ಯುವಕನ ಬಂಧಿಸಿದ NIA!
ಶಹಜಾದ್ ಭಟ್ಟಿ, ವಿಶಾಲ್ ಮೇತ್ರೆ
Published On :

ಬೀದರ್: ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಬೀದರ್ ಪೊಲೀಸರ ಸಹಕಾರದೊಂದಿಗೆ ಪಾಕಿಸ್ತಾನ ಮೂಲದ ಘೋಷಿತ ಉಗ್ರ ಶಹಜಾದ್ ಭಟ್ಟಿ ಆ್ಯಂಡ್​ ಇತರರೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆ ಬೀದರ್ ನ ಭಾಲ್ಕಿ ತಾಲೂಕಿನ ಯಣಕೂರ ಗ್ರಾಮದ ವಿಶಾಲ್ ಮೇತ್ರೆ ಎಂಬಾತನನ್ನು ಬಂಧಿಸಲಾಗಿದೆ.

ಭಾರತದ ಗ್ಯಾಂಗ್ ಸ್ಟರ್ ಲಾರೆನ್ಸ್​​ ಬಿಷ್ಣೋಯ್ ಗ್ಯಾಂಗ್‌ನಿಂದ ಹೊರಬಂದು ಪಾಕಿಸ್ತಾನದ ಪರವಾಗಿ ಶಹಜಾದ್ ಭಟ್ಟಿ ಉಗ್ರ ಚಟುವಟಿಕೆ ನಡೆಸುತ್ತಿದ್ದಾನೆ. ಇತನ್ನೊಂದಿಗೆ ಸಂಪರ್ಕ ಶಂಕೆ ಹಿನ್ನೆಲೆ ಯುಎಪಿಎ ಕಾಯ್ದೆಯಡಿ ವಿಶಾಲ್ ಮೇತ್ರೆಯನ್ನ ಎನ್​​ಐಎ ತಂಡ ಬಂಧಿಸಿದೆ. ವಿಶಾಲ್ ಮೇತ್ರೆಗೆ ಅಪರಾಧ ಹಿನ್ನೆಲೆ ಹೊಂದಿರುವ ಬಗ್ಗೆ ಮಾಹಿತಿ ಇದೆ. ಸದ್ಯ ಕೋರ್ಟ್‌ ಪ್ರಕ್ರಿಯೆ ನಡೆಯುತ್ತಿದ್ದು, ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ನೀಡುವುದಾಗಿ’ ಎಸ್‌ಪಿ ಪ್ರದೀಪ್ ಗುಂಟಿ ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.