ರಾಜ್ಯ

ಬೆಂಗಳೂರಿನ ಘೋರ ದುರಂತ: ಆರ್ಕೆಸ್ಟ್ರಾ ನೋಡುತ್ತಿದ್ದ ವೇಳೆ ಲೈಟ್ ಕಂಬ ಬಿದ್ದು ಓರ್ವ ಸಾವು, ಮತ್ತೋರ್ವ ಗಂಭೀರ!

ನಿನ್ನೆ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಮಾರತ್ತಹಳ್ಳಿಯ ಸಂಜಯನಗರದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಆರ್ಕೆಸ್ಟ್ರಾ ಕೂಡ ನಡೆಯುತ್ತಿತ್ತು.

ಬೆಂಗಳೂರಿನ ಘೋರ ದುರಂತ: ಆರ್ಕೆಸ್ಟ್ರಾ ನೋಡುತ್ತಿದ್ದ ವೇಳೆ ಲೈಟ್ ಕಂಬ ಬಿದ್ದು ಓರ್ವ ಸಾವು, ಮತ್ತೋರ್ವ ಗಂಭೀರ!
ಲೈಟ್ ಕಂಬ ಬಿದ್ದು ಓರ್ವ ಸಾವು, ಮತ್ತೋರ್ವ
Published On :

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಬದಿ ಇದ್ದ ಲೈಟ್ ಕಂಬ ಬಿದ್ದು ನೇಪಾಳ ಮೂಲದ ಓಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ನಿನ್ನೆ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಮಾರತ್ತಹಳ್ಳಿಯ ಸಂಜಯನಗರದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಆರ್ಕೆಸ್ಟ್ರಾ ಕೂಡ ನಡೆಯುತ್ತಿತ್ತು. ಹೀಗಾಗಿ ಜನ ರಸ್ತೆಯ ಪಕ್ಕದಲ್ಲಿ ನಿಂತು ಆರ್ಕೆಸ್ಟ್ರಾ ನೋಡುತ್ತಿದ್ದರು. ಈ ವೇಳೆ ಏಕಾಏಕಿ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಲೈಟ್ ಕಂಬ ತುಂಬಾ ಹಳೆಯದಾಗಿದ್ದು, ಕರೆಂಟ್ ಕನೆಕ್ಷನ್ ಇರಲಿಲ್ಲ. ಕಂಬ ಮಾತ್ರ ಹಾಗೇ ಬಿಡಲಾಗಿತ್ತು. ಹಲವು ಬಾರಿ ಜಿಬಿಎ ಅಧಿಕಾರಿಗಳಿಗೆ ಇದನ್ನು ತೆರವು ಮಾಡುವಂತೆ ಮನವಿ ಮಾಡಿದ್ರೂ, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು ಎನ್ನಲಾಗಿದೆ.

ರಸ್ತೆ ಬದಿಯಲ್ಲಿ ತುಕ್ಕು ಹಿಡಿದು ಅಪಾಯಕಾರಿಯಾಗಿದ್ದ ವಿದ್ಯುತ್ ಕಂಬವನ್ನು ಸೂಕ್ತ ಸಮಯದಲ್ಲಿ ಬದಲಾಯಿಸದೆ ನಿರ್ಲಕ್ಷ್ಯ ವಹಿಸಿದ್ದೇ ಈ ದುರಂತಕ್ಕೆ ನೇರ ಕಾರಣ ಎಂದು ಸ್ಥಳೀಯರು ಬೆಸ್ಕಾಂ ಹಾಗೂ ಜಿಬಿಎ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.