ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಕಾರು ಡಿಕ್ಕಿ ಹೊಡೆದು ಯುವತಿ ಸ್ಥಳದಲ್ಲೇ ಸಾವು!
ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ ಈ ಅಪಘಾತ ಸಂಭವಿಸಿದ್ದು, ಮೃತ ಯುವತಿಯನ್ನು ಕುಂಬಳಗೂಡು ಸಮೀಪದ ರಾಮೋಹಳ್ಳಿ ಗ್ರಾಮದ ಭೂಮಿಕಾ(22) ಎಂದು ಗುರುತಿಸಲಾಗಿದೆ.

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ದಾಟುತ್ತಿದ್ದ ಯುವತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ ಈ ಅಪಘಾತ ಸಂಭವಿಸಿದ್ದು, ಮೃತ ಯುವತಿಯನ್ನು ಕುಂಬಳಗೂಡು ಸಮೀಪದ ರಾಮೋಹಳ್ಳಿ ಗ್ರಾಮದ ಭೂಮಿಕಾ(22) ಎಂದು ಗುರುತಿಸಲಾಗಿದೆ.
ಭೂಮಿಕಾ ನಿನ್ನೆ ತಮ್ಮ ಸ್ನೇಹಿತರೊಂದಿಗೆ ಚನ್ನಪಟ್ಟಣಕ್ಕೆ ಆಗಮಿಸಿದ್ದರು. ತಡರಾತ್ರಿ ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರಸ್ತೆ ದಾಟಲು ಯತ್ನಿಸುತ್ತಿದ್ದಾಗ, ಅತಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ತೀವ್ರ ರಕ್ತಸ್ರಾವವಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ
ಈ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



