ರಾಜ್ಯ

ಕಲಬುರಗಿ ನಂತರ ಮೈಸೂರಿನಲ್ಲಿ 'ಸಿದ್ದರಾಮಯ್ಯ ವೃತ್ತ' ನಾಮಫಲಕ ಅಳವಡಿಕೆ; Video

ಕಲಬುರಗಿಯ ಹೈಕೋರ್ಟ್ ವೃತ್ತದಲ್ಲಿ ಯಾವುದೇ ಅಧಿಕೃತ ಅನುಮತಿ ಪಡೆಯದೆ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ರಾತ್ರೋರಾತ್ರಿ ಪ್ರತಿಷ್ಠಾಪಿಸಲಾಗಿತ್ತು. ಬಳಿಕ ನಗರ ಪಾಲಿಕೆ ಅಧಿಕಾರಿಗಳು ಪ್ರತಿಮೆಯನ್ನು ತೆರವುಗೊಳಿಸಿದ್ದರು.

ಕಲಬುರಗಿ ನಂತರ ಮೈಸೂರಿನಲ್ಲಿ 'ಸಿದ್ದರಾಮಯ್ಯ ವೃತ್ತ' ನಾಮಫಲಕ ಅಳವಡಿಕೆ; Video
ಸಿದ್ದರಾಮಯ್ಯ ನಾಮಫಲಕ
Published On :

ಮೈಸೂರು: ಕಲಬುರಗಿಯಲ್ಲಿ ಇತ್ತೀಚೆಗೆ ನಡೆದ ಸಿದ್ದರಾಮಯ್ಯ ಪ್ರತಿಮೆ ವಿವಾದದ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರು ಮೈಸೂರು–ಹುಣಸೂರು ರಸ್ತೆಯ ಲಿಂಗದೇವರಕೊಪ್ಪಲು ಗ್ರಾಮದ ಜಂಕ್ಷನ್‌ವೊಂದಕ್ಕೆ ‘ಸಿದ್ದರಾಮಯ್ಯ ವೃತ್ತ’ ಎಂದು ನಾಮಕರಣ ಮಾಡಿ ನಾಮಫಲಕ ಅಳವಡಿಸಿದ್ದಾರೆ.

ಕಲಬುರಗಿಯ ಹೈಕೋರ್ಟ್ ವೃತ್ತದಲ್ಲಿ ಯಾವುದೇ ಅಧಿಕೃತ ಅನುಮತಿ ಪಡೆಯದೆ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ರಾತ್ರೋರಾತ್ರಿ ಪ್ರತಿಷ್ಠಾಪಿಸಲಾಗಿತ್ತು. ಬಳಿಕ ನಗರ ಪಾಲಿಕೆ ಅಧಿಕಾರಿಗಳು ಪ್ರತಿಮೆಯನ್ನು ತೆರವುಗೊಳಿಸಿದ್ದರು.

ಇದಾದ ಕೆಲವೇ ವಾರಗಳ ಬಳಿಕ ಇದೀಗ ಮೈಸೂರಿನಲ್ಲೂ ಸಿದ್ದರಾಮಯ್ಯ ಅವರ ಬೆಂಬಲಿಗರು ಮತ್ತೊಂದು ಸಾರ್ವಜನಿಕ ಜಂಕ್ಷನ್‌ಗೆ ಅವರ ಹೆಸರನ್ನು ಇಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.