ಬೆಂಗಳೂರಿನಲ್ಲಿ ಜಿಮ್ ಟ್ರೈನರ್ ಸಾವು! ನಾಲ್ವರ ವಿರುದ್ಧ ಕೊಲೆ ಕೇಸ್ ದಾಖಲು
ಶನಿವಾರದಂದು ಮನೆಯಿಂದ ಹೊರಡುವಾಗ, ತಡವಾದರೆ ಬೆಳಿಗ್ಗೆ ವಾಪಸಾಗುವುದಾಗಿ ನಂದನ್ ತಮ್ಮ ಕುಟುಂಬಕ್ಕೆ ತಿಳಿಸಿದ್ದರು ಎನ್ನಲಾಗಿದೆ.

ಬೆಂಗಳೂರು: ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್ ಒಂದರಲ್ಲಿ ನಡೆದ ಹಲ್ಲೆ ಘಟನೆಯ ನಂತರ 25 ವರ್ಷದ ಜಿಮ್ ತರಬೇತುದಾರರೊಬ್ಬರು ಮೃತಪಟ್ಟಿದ್ದಾರೆ. ನಂದನ್ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಇವರು ತರಬೇತುದಾರರಾಗಿ ಕೆಲಸ ಮಾಡುತ್ತಿದ್ದ ಜಿಮ್‌ನ ವಾರ್ಷಿಕೋತ್ಸವದ ಸಂಭ್ರಮಾಚರಣೆಯ ನಂತರ ಈ ಘಟನೆ ನಡೆದಿದೆ. ದೂರಿನ ಪ್ರಕಾರ, ಶನಿವಾರದಂದು ಮನೆಯಿಂದ ಹೊರಡುವಾಗ, ತಡವಾದರೆ ಬೆಳಿಗ್ಗೆ ವಾಪಸಾಗುವುದಾಗಿ ನಂದನ್ ತಮ್ಮ ಕುಟುಂಬಕ್ಕೆ ತಿಳಿಸಿದ್ದರು ಎನ್ನಲಾಗಿದೆ.
ಜಿಮ್ ವಾರ್ಷಿಕೋತ್ಸವ ಕಾರ್ಯಕ್ರಮದ ನಂತರ ನಂದನ್ ಮತ್ತು ಜಿಮ್‌ನ ಇತರ ಸಿಬ್ಬಂದಿ ಪರಿಚಯಸ್ಥರೊಬ್ಬರ ಅಪಾರ್ಟ್‌ಮೆಂಟ್‌ಗೆ ತೆರಳಿದ್ದರು. ಅಲ್ಲಿ ನಡೆದ ಜಗಳದ ವೇಳೆ ನಂದನ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ನಂತರ ಅವರನ್ನು ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಘಟನೆಯ ಬಗ್ಗೆ ತಿಳಿದ ನಂತರ ಆಸ್ಪತ್ರೆಗೆ ತಲುಪಿದ ನಂದನ್ ಅವರ ತಾಯಿ ಮಂಜುಳಾ, ತನ್ನ ಮಗನ ದೇಹದ ಮೇಲಿನ ಗಾಯದ ಗುರುತುಗಳನ್ನು ಗಮನಿಸಿದ್ದಾರೆ. ಬಳಿಕ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಜಗಳದ ವೇಳೆ ನಂದನ್ ಮೇಲೆ ಹಲ್ಲೆ ನಡೆಸಿದ್ದರಿಂದಲೇ ಅವರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಅವರು ಅಮೃತಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ, ಪೊಲೀಸರು ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಮೃತಹಳ್ಳಿ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



