ರಾಜ್ಯ

SIR v/s FIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಶಾಸಕನ ವಿರುದ್ಧ ಸೌಮ್ಯಾ ರೆಡ್ಡಿ ದೂರು; Video

ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಫಾರ್ಮ್‌-7 ದುರ್ಬಳಕೆ ಮಾಡಿಕೊಂಡು ಅಲ್ಪ ಸಂಖ್ಯಾತರ ಹೆಸರುಗಳನ್ನು ಡಿಲೀಟ್ ಮಾಡಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸುತ್ತಿದ್ದಾರೆ.

SIR v/s FIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಶಾಸಕನ ವಿರುದ್ಧ ಸೌಮ್ಯಾ ರೆಡ್ಡಿ ದೂರು; Video
ಬಿಜೆಪಿ ಶಾಸಕನ ವಿರುದ್ಧ ಸೌಮ್ಯಾ ರೆಡ್ಡಿ ದೂರು
Published On :

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರ ಹಾಗೂ ಪ್ರತಿಭಟನೆಗೆ ಕಾರಣವಾಗಿದೆ.

ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಫಾರ್ಮ್‌-7 ದುರ್ಬಳಕೆ ಮಾಡಿಕೊಂಡು ಅಲ್ಪ ಸಂಖ್ಯಾತರ ಹೆಸರುಗಳನ್ನು ಡಿಲೀಟ್ ಮಾಡಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸುತ್ತಿದ್ದಾರೆ. ಅಲ್ಲದೆ ಈ ಸಂಬಂಧ ರಾಜ್ಯದ ಹಲವೆಡೆ ದೂರುಗಳು ದಾಖಲಾಗುತ್ತಿವೆ.

ಇದೀಗ ಜಯನಗರ ಕ್ಷೇತ್ರದಲ್ಲಿ ಒಟ್ಟು 5698 ಫಾರ್ಮ್-7 ಸಲ್ಲಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿ ಅವರು ಬಿಜೆಪಿ ಶಾಸಕನ ಹೆಸರು ಉಲ್ಲೇಖಿಸಿ ದೂರು ನೀಡಿದ್ದಾರೆ.

ಬೆಂಗಳೂರಿನ ಜಯನಗರ ಕ್ಷೇತ್ರದಲ್ಲಿ ಒಟ್ಟು 5698 ಫಾರ್ಮ್-7 ಸಲ್ಲಿಸಲಾಗಿದೆ ಎಂದು ಆರೋಪಿಸಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರು ಸೋಮವಾರ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸೌಮ್ಯಾ ರೆಡ್ಡಿ ಅವರು, ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿ ಹೆಸರು ಉಲ್ಲೇಖಿಸಿ ದೂರು ನೀಡಿದ್ದು, ಅಕ್ರಮ‌ ಎಸಗಿರುವ ಬಗ್ಗೆ ವಿಡಿಯೋ, ಫೋಟೋ ಸಾಕ್ಷ್ಯಗಳನ್ನೂ ನೀಡಿದ್ದಾರೆ. ಹಾಗಾಗಿ ದಾಖಲೆ ಪರಿಶೀಲಿಸಿ ಕಾನೂನು ಕ್ರಮಕ್ಕೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಜಯನಗರ ಕ್ಷೇತ್ರದಲ್ಲಿ ಒಟ್ಟು 5,698 ಫಾರ್ಮ್-7 ಸಲ್ಲಿಕೆ ಕುರಿತು ಶಂಕೆ ವ್ಯಕ್ತವಾಗಿದ್ದು, ಗುರಪ್ಪನಪಾಳ್ಯ ವಾರ್ಡ್‌ನಲ್ಲೇ 4,327ಕ್ಕೂ ಹೆಚ್ಚು ಹೆಸರು ಡಿಲೀಟ್ ಆರೋಪ ಕೇಳಿಬಂದಿದೆ. BLO ಲೋಕೇಶ್ ಕೋರಿಕೆಯ ಮೇರೆಗೆ ಫಾರ್ಮ್-7 ಸಲ್ಲಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.