ರಾಜ್ಯ

Bengaluru Rains: ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ವಾಹನ ಸವಾರರ ಪರದಾಟ; ಮುಂದಿನ 2 ದಿನ ಮಳೆ

ಭಾರೀ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಪರದಾಟ ನಡೆಸುವಂತಾಗಿದೆ.

Bengaluru Rains: ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ವಾಹನ ಸವಾರರ ಪರದಾಟ; ಮುಂದಿನ 2 ದಿನ ಮಳೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಡೆ ಸೋಮವಾರ ಮಧ್ಯಾಹ್ನ ದಿಢೀರ್ ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಭಾರೀ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಪರದಾಟ ನಡೆಸುವಂತಾಗಿದೆ.

ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೆಆರ್ ಪುರಂ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.

ಕೆಆರ್ ಪುರಂ ಮೆಟ್ರೋ ನಿಲ್ದಾಣ ಮತ್ತು ಟಿನ್ ಫ್ಯಾಕ್ಟರಿ ರಸ್ತೆಯ ಸುತ್ತಮುತ್ತ ಜಲಾವೃತಗೊಂಡಿದ್ದು, ಸಂಚಾರ ಸಂಪೂರ್ಣ ನಿದಾನಗೊಂಡಿದೆ. ದಿಢೀರ್ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ದೃಶ್ಯಗೋಚರತೆ ಕಡಿಮೆಯಾಗಿದ್ದು, ವಾಹನ ಸವಾರರು ಹೆಡ್‌ಲೈಟ್ ಆನ್ ಮಾಡಿಕೊಂಡು ಸಾಗುವಂತಾಯಿತು.

ಗೆದ್ದಲಹಳ್ಳಿ ರೈಲ್ವೆ ಸೇತುವೆ ಬಳಿ ರಸ್ತೆಯಲ್ಲಿ ಭಾರಿ ಪ್ರಮಾಣದ ಮಳೆ ನೀರು ಶೇಖರಣೆಯಾಗಿದೆ. ಹೀಗಾಗಿ ಹೆಣ್ಣೂರು ಕಡೆಗೆ ಸಾಗುವ ಮಾರ್ಗದಲ್ಲಿ ವಾಹನ ಸಂಚಾರ ನಿಧಾನಗತಿಯಲ್ಲಿದ್ದು, ಚಾಲಕರು ಜಾಗರೂಕತೆಯಿಂದ ಚಲಿಸುವಂತೆ ಬೆಂಗಳೂರು ಸಂಚಾರ ಪೊಲೀಸರು ವಾಹನ ಸವಾರರಿಗೆ ಸಲಹೆ ನೀಡಿದ್ದಾರೆ.

ಮುಂದಿನ ಎರಡು ದಿನ ಮಳೆ

ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಹಾಗೂ ಸಿಡಿಲು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.