ರಾಜ್ಯ

ಕ್ರೀಡಾ ಸಾಧಕರಿಗೆ ಸಿಹಿ ಸುದ್ದಿ; ಸರ್ಕಾರಿ ಉದ್ಯೋಗದಲ್ಲಿ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ: ಪರಮೇಶ್ವರ್

ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ರಾಜ್ಯದ ಕೀರ್ತಿಯನ್ನು ನಿರಂತರವಾಗಿ ಹೆಚ್ಚಿಸುತ್ತಿದ್ದಾರೆ. ಅವರ ಪ್ರತಿಭೆಯನ್ನು ಗುರುತಿಸಿ, ಸಾಧನೆಗೆ ಪ್ರೋತ್ಸಾಹ ನೀಡುವುದು ಹಾಗೂ ಕ್ರೀಡಾ ಬದುಕಿನ ನಂತರವೂ...

ಕ್ರೀಡಾ ಸಾಧಕರಿಗೆ ಸಿಹಿ ಸುದ್ದಿ; ಸರ್ಕಾರಿ ಉದ್ಯೋಗದಲ್ಲಿ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ: ಪರಮೇಶ್ವರ್
ಸಂಗ್ರಹ ಚಿತ್ರ
Published On :

ಬೆಂಗಳೂರು: ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ರಾಜ್ಯದ ಕೀರ್ತಿಯನ್ನು ನಿರಂತರವಾಗಿ ಹೆಚ್ಚಿಸುತ್ತಿದ್ದಾರೆ. ಅವರ ಪ್ರತಿಭೆಯನ್ನು ಗುರುತಿಸಿ, ಸಾಧನೆಗೆ ಪ್ರೋತ್ಸಾಹ ನೀಡುವುದು ಹಾಗೂ ಕ್ರೀಡಾ ಬದುಕಿನ ನಂತರವೂ ಭದ್ರ ಭವಿಷ್ಯ ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದ್ದು, ಕರ್ನಾಟಕ ಸಿವಿಲ್ ಸೇವೆಗಳ ಎಲ್ಲಾ ನೇರ ನೇಮಕಾತಿಗಳಲ್ಲಿ ಕ್ರೀಡಾ ಸಾಧಕರಿಗೆ ಶೇ.2ರಷ್ಟು ಮೀಸಲಾತಿ ಕಲ್ಪಿಸಿ ಅಧಿಕೃತ ಅಧಿಸೂಚನೆ ಹೊರಡಿಸಿದ್ದೇವೆ. ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗ ಒಳಗೊಂಡಂತೆ ಶೇ.2ರಷ್ಟು ಮೀಸಲಾತಿ ಅನ್ವಯವಾಗಲಿದೆ.

ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸವಿದ್ದು, ರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ಒಲಿಂಪಿಕ್ಸ್‌, ಏಷ್ಯನ್‌ ಗೇಮ್ಸ್‌ ಸೇರಿದಂತೆ ಅಧಿಸೂಚಿತ 34 ಕ್ರೀಡೆಗಳಲ್ಲಿನ ಸಾಧನೆಗೆ ಅನುಗುಣವಾಗಿ ಕೃಪಾಂಕದ ಸೌಲಭ್ಯವೂ ಇರಲಿದೆ.

ಕ್ರೀಡಾಪಟುಗಳು ಪದಕ ಗೆಲ್ಲುವ ಕ್ಷಣದಲ್ಲಿ ಮಾತ್ರವಲ್ಲ, ಅವರ ಕ್ರೀಡಾ ಪಯಣದ ಪ್ರತಿಯೊಂದು ಹಂತದಲ್ಲೂ ಸರ್ಕಾರ ಅವರ ಜೊತೆಗೆ ನಿಲ್ಲಲಿದೆ. ಪ್ರತಿಭೆಗೆ ಅವಕಾಶ, ಸಾಧನೆಗೆ ಗೌರವ ಮತ್ತು ಭವಿಷ್ಯಕ್ಕೆ ಭದ್ರತೆ ನೀಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.