ಮಂಡ್ಯ: KRS ಬಳಿ ನಡೆಯಬೇಕಿದ್ದ ಕಾವೇರಿ ಆರತಿ ಮುಂದೂಡಿಕೆ
ಪೂರ್ವ ನಿಯೋಜಿತ ಕಾರ್ಯಕ್ರಮಗಳು ಇರುವುದರಿಂದ ಕಾರ್ಯಕ್ರಮದ ದಿನಾಂಕವನ್ನು ಬದಲಾಯಿಸಲಾಗಿದೆ. ಇದೀಗ ಪರಿಷ್ಕೃತ ದಿನಾಂಕದಂತೆ, ಅಕ್ಟೋಬರ್ 18 ರಿಂದ 23 ರವರೆಗೆ ಸತತವಾಗಿ ಕೆಆರ್‌ಎಸ್ ಡ್ಯಾಂ ಬಳಿ ಕಾವೇರಿ ಆರತಿ ಜರುಗಲಿದೆ.

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್‌ಎಸ್ ಅಣೆಕಟ್ಟಿನ ಬಳಿ ಆಯೋಜಿಸಲು ಉದ್ದೇಶಿಸಲಾಗಿದ್ದ ಕಾವೇರಿ ಆರತಿ ಕಾರ್ಯಕ್ರಮದ ದಿನಾಂಕ ಮುಂದೂಡಲಾಗಿದೆ.
ಈ ಹಿಂದೆ ನಿಗದಿಯಾಗಿದ್ದ ವೇಳಾಪಟ್ಟಿಯ ಪ್ರಕಾರ ಅ.11 ರಿಂದ ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆರಂಭವಾಗಬೇಕಿತ್ತು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿತ್ತು.
ಆದರೆ, ಅಂದು ಅವರಿಗೆ ಪೂರ್ವ ನಿಯೋಜಿತ ಕಾರ್ಯಕ್ರಮಗಳು ಇರುವುದರಿಂದ ಕಾರ್ಯಕ್ರಮದ ದಿನಾಂಕವನ್ನು ಬದಲಾಯಿಸಲಾಗಿದೆ. ಇದೀಗ ಪರಿಷ್ಕೃತ ದಿನಾಂಕದಂತೆ, ಅಕ್ಟೋಬರ್ 18 ರಿಂದ 23 ರವರೆಗೆ ಸತತವಾಗಿ ಕೆಆರ್‌ಎಸ್ ಡ್ಯಾಂ ಬಳಿ ಕಾವೇರಿ ಆರತಿ ಜರುಗಲಿದೆ.
ಉತ್ತರ ಭಾರತದ ಗಂಗಾ ಆರತಿಯ ಮಾದರಿಯಲ್ಲಿ ದಕ್ಷಿಣದ ಜೀವನದಿ ಕಾವೇರಿಗೂ ಪೂಜೆ ಸಲ್ಲಿಸುವ ಮಹತ್ವಾಕಾಂಕ್ಷೆಯೊಂದಿಗೆ ಕಳೆದ ವರ್ಷದಿಂದ 'ಕಾವೇರಿ ಆರತಿ'ಯನ್ನು ಪ್ರಾರಂಭಿಸಲಾಯಿತು. ಹಿಂದಿನ ಅವಧಿಯಲ್ಲಿ ಜಲಸಂಪನ್ಮೂಲ ಸಚಿವರೂ ಆಗಿದ್ದ ಡಿ.ಕೆ. ಶಿವಕುಮಾರ್ ಅವರು ಈ ಕಾರ್ಯಕ್ರಮವನ್ನು ಹುಟ್ಟುಹಾಕಿದ್ದರು. ಈ ವರ್ಷ ಮುಂಗಾರು ಕೊರತೆಯಿಂದ ಉತ್ತಮ ಮಳೆಯಾಗದಿದ್ದರೂ ಲಭ್ಯವಿರುವ ನೀರಿಗೆ ಅನುಗುಣವಾಗಿ ಕಾವೇರಿ ಆರತಿ ನೆರವೇರಿಸಲು ಜಿಲ್ಲಾಡಳಿತ ಹಾಗೂ ಕಾವೇರಿ ನೀರಾವರಿ ನಿಗಮ ಭರದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



