ರಾಜ್ಯ

ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಮನ್‌ಮುಲ್ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅರೆಸ್ಟ್!

ಪ್ರಕರಣದಲ್ಲಿ ಶಿವಪ್ಪ ಅವರ ಪಾತ್ರವಿರುವುದು ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಮನ್‌ಮುಲ್ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅರೆಸ್ಟ್!
ಉಮ್ಮಡಹಳ್ಳಿ ಶಿವಪ್ಪ
Published On :

ಮಂಡ್ಯ: ಮಂಡ್ಯದ ಮನ್‌ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಕ್ಕೂಟದ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅವರನ್ನು ಮದ್ದೂರು ಪೊಲೀಸರು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ ಎನ್ನಲಾಗಿದೆ.

ಪ್ರಕರಣದಲ್ಲಿ ಶಿವಪ್ಪ ಅವರ ಪಾತ್ರವಿರುವುದು ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಇಂದು ಮದ್ದೂರು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ನೀಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ (A1) ಪ್ರದೀಪ್ ಕುಮಾರ್ ಜಾದವ್, ನಿರ್ದೇಶಕರೊಬ್ಬರ ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ಈ ಅಕ್ರಮ ದಂಧೆಯಲ್ಲಿ ಶಿವಪ್ಪ ಕೂಡಾ ಶಾಮೀಲಾಗಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಸಾಕ್ಷ್ಯದ ಆಧಾರದ ಮೇಲೆ ಪೊಲೀಸರು ನ್ಯಾಯಾಂಗ ಬಂಧನದಲ್ಲಿದ್ದ ಜಾದವ್‌ನನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದರು.

ಬಳಿಕ ಜಾದವ್ ಮತ್ತು ಮಾಜಿ ಅಧ್ಯಕ್ಷ ಶಿವಪ್ಪ ಇಬ್ಬರನ್ನೂ ಮುಖಾಮುಖಿ ಕೂರಿಸಿ ವಿಚಾರಣೆ ನಡೆಸಲಾಯಿತು. ಈ ವೇಳೆ ಜಾದವ್ ನೇರವಾಗಿ ಶಿವಪ್ಪ ಅವರ ವಿರುದ್ಧವೇ ಅಕ್ರಮದ ಆರೋಪಗಳನ್ನು ಹೊರಿಸಿದ್ದು, ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ಕೂಡ ನಡೆದಿದೆ.

ವಿಚಾರಣೆ ವೇಳೆ ಶಿವಪ್ಪ ಅವರ ಪಾತ್ರದ ಬಗ್ಗೆ ಸ್ಪಷ್ಟ ಸುಳಿವು ದೊರೆತ ಬೆನ್ನಲ್ಲೇ ಪೊಲೀಸರು ಅವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಪ್ರದೀಪ್ ಕುಮಾರ್ ಜಾದವ್ ಸೇರಿದಂತೆ ಐದು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಇದೀಗ ಮಾಜಿ ಅಧ್ಯಕ್ಷ ಶಿವಪ್ಪ ಅವರ ಬಂಧನದೊಂದಿಗೆ ಈ ಜಾಲದಲ್ಲಿ ಸೆರೆಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಮತ್ತಷ್ಟು ಮಂದಿಯ ವಿಚಾರಣೆ ನಡೆಯುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.