ರಾಜ್ಯ

'ನೈಸ್‌'ಗೆ ಸುಪ್ರೀಂ ಕೋರ್ಟ್ ಶಾಕ್; ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಕಾರ!

2025ರ ಜು.4ರಂದು ಭೂಸ್ವಾಧೀನ ರದ್ದುಗೊಳಿಸಿ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ನೈಸ್ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

'ನೈಸ್‌'ಗೆ ಸುಪ್ರೀಂ ಕೋರ್ಟ್ ಶಾಕ್; ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಕಾರ!
ನೈಸ್ ರಸ್ತೆ
Published On :

ನವದೆಹಲಿ: ನೈಸ್​​ ಅಕ್ರಮಗಳ ವಿರುದ್ಧ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸಮರ ಸಾರಿರುವ ಬೆನ್ನಲ್ಲೇ ಸುಪ್ರೀಂ ಕೋರ್ಟ್ ನಲ್ಲೂ ಸಂಸ್ಥೆಗೆ ಭಾರೀ ಹಿನ್ನೆಡೆಯಾಗಿದೆ.

2025ರ ಜು.4ರಂದು ಭೂಸ್ವಾಧೀನ ರದ್ದುಗೊಳಿಸಿ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ನೈಸ್ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ಸಾಧ್ಯವಿಲ್ಲ ಎಂದು ಹೇಳಿ, ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿದೆ.

ನೈಸ್ ಪರ ವಕೀಲರು ವಾದ ಮಂಡಿಸಿ, ಯೋಜನೆಯ ಶೇ. 25ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ. ಸುಮಾರು 1,100 ಎಕರೆ ಭೂಮಿಯನ್ನು ಬಳಸಿಕೊಳ್ಳಲಾಗಿದ್ದು, ರೈತರಿಗೆ ಪರಿಹಾರವನ್ನೂ ವಿತರಿಸಲಾಗಿದೆ. ಆದ್ದರಿಂದ ಹೈಕೋರ್ಟ್ ಆದೇಶಕ್ಕೆ ತಕ್ಷಣವೇ ತಡೆ ನೀಡಬೇಕು ಅಥವಾ ಕನಿಷ್ಠ ಯಥಾಸ್ಥಿತಿ (Status Quo) ಕಾಯ್ದುಕೊಳ್ಳಲು ಆದೇಶಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಸಂತ್ರಸ್ತ ರೈತರ ಪರ ವಕೀಲರು, ಈವರೆಗೂ ರೈತರಿಗೆ ನ್ಯಾಯಯುತ ಪರಿಹಾರ ಸಂದಾಯವಾಗಿಲ್ಲ. ಬರೋಬ್ಬರಿ 23 ವರ್ಷಗಳಿಗೂ ಹೆಚ್ಚು ಕಾಲದಿಂದ ರೈತರ ಭೂಮಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಇಲ್ಲಿ ವ್ಯವಸ್ಥಿತ ಅಕ್ರಮ ನಡೆದಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಇದೇ ವೇಳೆ ರಾಜ್ಯ ಸರಕಾರದ ಪರ ವಕೀಲರು ಹಾಜರಾಗಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ಅದನ್ನು ಪರಿಗಣಿಸಬೇಕು ಎಂದು ಕೋರಿದರು.

ಎಲ್ಲಾ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠ, ಸಮಗ್ರ ವಿಚಾರಣೆ ನಡೆಸದೆ ಯಾವುದೇ ಮಧ್ಯಂತರ ಆದೇಶ ಅಥವಾ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಖಡಾಖಂಡಿತವಾಗಿ ತಿಳಿಸಿತು. ಮುಂದಿನ ವಿಚಾರಣೆಯನ್ನು ನವೆಂಬರ್ 2ಕ್ಕೆ ನಿಗದಿಪಡಿಸಿದ್ದು, ಅಂದು ಎಲ್ಲಾ ಅರ್ಜಿದಾರರ ವಾದವನ್ನು ಆಲಿಸುವುದಾಗಿ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.