ಭದ್ರಾವತಿಯ VISL ಕಾರ್ಖಾನೆಯ ಡಿಜಿಎಂ ಆತ್ಮಹತ್ಯೆಗೆ ಶರಣು; ಕಾರಣ ನಿಗೂಢ!
ವಿಐಎಸ್ಎಲ್ ಅಧಿಕಾರಿಗಳ ಕ್ವಾಟ್ರಸ್‌ನಲ್ಲಿರುವ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗೋವಿಂದರಾಜ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ವಿಐಎಸ್ಎಲ್‌ನ ಎಲೆಕ್ಟ್ರಿಕ್ ಡಿಪಾರ್ಟ್ಮೆಂಟ್‌ನಲ್ಲಿ ಡೆಪ್ಯೂಟಿ ಜನರಲ್ ಮ್ಯಾನೇಜರ್ ಆಗಿದ್ದ ಗೋವಿಂದರಾಜ್(51) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಿಐಎಸ್ಎಲ್ ಅಧಿಕಾರಿಗಳ ಕ್ವಾಟ್ರಸ್‌ನಲ್ಲಿರುವ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗೋವಿಂದರಾಜ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ತಮಿಳುನಾಡಿನ ಸೇಲಂ ಮೂಲದ ಗೋವಿಂದರಾಜ್ ಅವರು ಕಳೆದ 13 ವರ್ಷದಿಂದ ವಿಐಎಸ್‌ಎಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರವಷ್ಟೇ ಪತ್ನಿ, ಮಕ್ಕಳನ್ನು ಸೇಲಂಗೆ ಕಳುಹಿಸಿ ಭದ್ರಾವತಿ ನಗರದ ಸೇಂಟ್ ಚಾರ್ಲ್ಸ್ ಶಾಲೆಯ ಎದುರಿರುವ ಕ್ವಾಟ್ರಸ್‌ಗೆ ಬಂದಿದ್ದ ಗೋವಿಂದರಾಜ್ ಅವರು ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದ ವೇಳೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಸೋಮವಾರ ಬೆಳಗ್ಗೆ ಗೋವಿಂದರಾಜ್ ಅವರ ಆಪ್ತ ಸಹಾಯಕ ಕರೆ ಮಾಡಿದ್ದಾರೆ. ಹಲವು ಬಾರಿ ಕರೆ ಮಾಡಿದರೂ ಕರೆಯನ್ನು ಸ್ವೀಕರಿಸದ ಕಾರಣ ಆತ ಕ್ವಾಟ್ರಸ್‌ಗೆ ತೆರಳಿ ಪರಿಶೀಲಿಸಿದ್ದಾರೆ. ಈ ವೇಳೆ ಡಿಜಿಎಂ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬೆಳಕಿಗೆ ಬಂದಿದೆ.
ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡಿಜಿಎಂ ಗೋವಿಂದರಾಜ್ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಸೇಲಂನಲ್ಲಿದ್ದ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಸೇಲಂನಿಂದ ಆಗಮಿಸುತ್ತಿದ್ದಾರೆ. ಆದರೆ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ.
ಈ ಸಂಬಂಧ ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



