ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು
ಪ್ರಸ್ತುತ ಪೊಲೀಸ್ ಆಯುಕ್ತರ ಹುದ್ದೆಯನ್ನು 'ಮುಖ್ಯ ಪೊಲೀಸ್ ಆಯುಕ್ತರು' ಎಂದು ಉನ್ನತೀಕರಿಸಲಾಗುವುದು.

ಬೆಂಗಳೂರು: ರಾಜಧಾನಿ ಬೆಂಗಳೂರಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಅಪರಾಧ ನಿಯಂತ್ರಣ, ಸಂಚಾರ ನಿರ್ವಹಣೆ ಹಾಗೂ ಸಾರ್ವಜನಿಕ ಸುರಕ್ಷತೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತಾಲಯವನ್ನು ಪುನರ್‌ಸಂಘಟಿಸಲು ಮಂಗಳವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬೆಂಗಳೂರಿನಲ್ಲಿ ಐದು ಪ್ರತ್ಯೇಕ ಕಮಿಷನರೇಟ್‌ಗಳ ರಚನೆ ಆಗಲಿದೆ. ಇದಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು.
ಸದ್ಯ ಚಾಲ್ತಿಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತಾಲಯವನ್ನು ಮುಖ್ಯ ಪೊಲೀಸ್ ಆಯುಕ್ತರ ಒಟ್ಟಾರೆ ಮೇಲ್ವಿಚಾರಣೆಯಡಿಯಲ್ಲಿ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಮತ್ತು ಕೇಂದ್ರ ಎಂಬ ಐದು ಪ್ರತ್ಯೇಕ ಪೊಲೀಸ್ ಆಯುಕ್ತಾಲಯಗಳಾಗಿ ವಿಭಜಿಸಿ ಪುನರ್ ರಚಿಸಲಾಗುವುದು ಎಂದರು.
1,022 ಹೊಸ ಹುದ್ದೆ ಸೃಷ್ಟಿ
ಪ್ರಸ್ತುತ ಪೊಲೀಸ್ ಆಯುಕ್ತರ ಹುದ್ದೆಯನ್ನು 'ಮುಖ್ಯ ಪೊಲೀಸ್ ಆಯುಕ್ತರು' ಎಂದು ಉನ್ನತೀಕರಿಸಲಾಗುವುದು. ಜಂಟಿ ಅಥವಾ ಅಪರ ಪೊಲೀಸ್ ಆಯುಕ್ತರು(ಸಂಚಾರ) ಹುದ್ದೆಯನ್ನು 'ಪೊಲೀಸ್ ಆಯುಕ್ತರು(ಸಂಚಾರ)' ಎಂದು ಮರುಪದನಾಮೀಕರಿಸಲಾಗುವುದು. ಈ ಯೋಜನೆಗೆ ಅಗತ್ಯವಿರುವಂತೆ ಒಟ್ಟು 1,022 ಹೊಸ ಹುದ್ದೆಗಳನ್ನು ಸೃಜಿಸಲು ಆರ್ಥಿಕ ಇಲಾಖೆಯು ಒಪ್ಪಿಗೆ ನೀಡಿದ್ದು, ಸಚಿವ ಸಂಪುಟ ಅನುಮೋದಿಸಿದೆ ಎಂದರು.
ಪ್ರಸ್ತಾವಿತ ಘಟಕಗಳಲ್ಲಿ ಅಪರಾಧ ಪ್ರಕರಣಗಳ ನಿರ್ವಹಣೆ, ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಸಾರ್ವಜನಿಕ ಭದ್ರತೆಗಾಗಿ ಒಟ್ಟು 6,550 ಹುದ್ದೆಗಳ ಅಗತ್ಯವಿದ್ದು, ಹೊಸ ಹುದ್ದೆಗಳ ಜೊತೆಗೆ ಪ್ರಸ್ತುತ ಚಾಲ್ತಿಯಲ್ಲಿರುವ ಹುದ್ದೆಗಳನ್ನು ಮರುನಿಯೋಜಿಸಿ ವ್ಯವಸ್ಥೆಯನ್ನು ಬಲಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.
ಇನ್ನು ಸಂಚಾರ ನಿರ್ವಹಣೆಗೆ ಅನುಕೂಲವಾಗುವಂತೆ ಕೇಂದ್ರ ಸಂಚಾರ ವಿಭಾಗಕ್ಕೆ 2, ಪಶ್ಚಿಮ ಸಂಚಾರ ವಿಭಾಗಕ್ಕೆ 1, ಉತ್ತರ ಸಂಚಾರ ವಿಭಾಗಕ್ಕೆ 1 ಮತ್ತು ಪಶ್ಚಿಮ ಕಾನೂನು ಸುವ್ಯವಸ್ಥೆ ವಿಭಾಗಕ್ಕೆ 2ರಂತೆ ಒಟ್ಟು 6 ಹೊಸ ಎಸಿಪಿ (ACP) ಹುದ್ದೆಗಳನ್ನು ಸೃಷ್ಟಿಸಲಾಗುವುದು. ಪ್ರತಿಯೊಂದು ಎಸಿಪಿ ಕಚೇರಿಗೆ ತಲಾ 5 ಕಾರ್ಯಕಾರಿ ಹುದ್ದೆಗಳನ್ನು ಹೊಸದಾಗಿ ನೀಡಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



