ರಾಜ್ಯ

ಮಂಡ್ಯದ ಗಂಡು ಅಂಬರೀಶ್‌ಗೆ ಸಿಗುತ್ತಾ ಕರ್ನಾಟಕ ರತ್ನ? ಸರ್ಕಾರಕ್ಕೆ ಸಚಿವ ರಾಮಲಿಂಗಾರೆಡ್ಡಿ ಪತ್ರ

ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿ ನೀಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಮಂಡ್ಯದ ಗಂಡು ಅಂಬರೀಶ್‌ಗೆ ಸಿಗುತ್ತಾ ಕರ್ನಾಟಕ ರತ್ನ? ಸರ್ಕಾರಕ್ಕೆ ಸಚಿವ ರಾಮಲಿಂಗಾರೆಡ್ಡಿ ಪತ್ರ
ರೆಬೆಲ್ ಸ್ಟಾರ್ ಅಂಬರೀಶ್‌ಗೆ ಸಿಗುತ್ತಾ ಕರ್ನಾಟಕ ರತ್ನ? — Online Desk
Published On :

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿ ನೀಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕನ್ನಡ ಚಿತ್ರರಂಗ ಹಾಗೂ ಸಮಾಜಕ್ಕೆ ಅಂಬರೀಶ್ ಅವರು ನೀಡಿರುವ ಅಪ್ರತಿಮ ಕೊಡುಗೆ, ಅವರ ಜನಪ್ರಿಯತೆ ಮತ್ತು ನಾಡಿನ ಮೇಲಿನ ಪ್ರೀತಿಯನ್ನು ಗೌರವಿಸಿ ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕರ್ನಾಟಕ ರತ್ನವನ್ನು ಮರಣೋತ್ತರವಾಗಿ ಘೋಷಿಸಬೇಕು ಎಂದು ಲಿಖಿತವಾಗಿ ಮನವಿ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಪತ್ರದಲ್ಲಿ ಏನಿದೆ?

ಕನ್ನಡ ಚಿತ್ರರಂಗದ ದಿವಂಗತ ಹಿರಿಯ ನಟ, ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮರಣೋತ್ತರವಾಗಿ ರಾಜ್ಯದ ಅತ್ಯುನ್ನತ ನಾಗರಿಕ ಗೌರವವಾದ 'ಕರ್ನಾಟಕ ರತ್ನ' ಪ್ರಶಸ್ತಿಯನ್ನು ಘೋಷಿಸಬೇಕು ಎಂದು ಒತ್ತಾಯಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರಿಗೆ ಈ ಪತ್ರವನ್ನು ಬರೆದಿದ್ದಾರೆ. ಅದರಲ್ಲಿ,  "ಅಂಬರೀಶ್ ಅವರು ಕೇವಲ ಒಬ್ಬ ಅದ್ಭುತ ನಟರಾಗಿ ಮಾತ್ರವಲ್ಲದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಸಚಿವರಾಗಿ, ಜನಪ್ರಿಯ ರಾಜಕಾರಣಿಯಾಗಿ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಕಾವೇರಿ ನೀರಾವರಿ ಹೋರಾಟದ ಸಂದರ್ಭದಲ್ಲಿ ಅವರು ಮಂಡ್ಯದ ಜನರ ಹಿತಕ್ಕಾಗಿ ತಮ್ಮ ಕೇಂದ್ರ ಸಚಿವ ಸ್ಥಾನಕ್ಕೇ ರಾಜೀನಾಮೆ ನೀಡಿದ ಮಹಾನ್ ನಾಯಕ. ಚಿತ್ರರಂಗ ಮತ್ತು ಸಮಾಜಕ್ಕೆ ಅವರು ಸಲ್ಲಿಸಿದ ನಿರುಪಮಾನ ಸೇವೆಯನ್ನು ಪರಿಗಣಿಸಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು" ಎಂದು ವಿನಂತಿಸಿದ್ದಾರೆ.

ಮುಂದುವರೆದು, ಅಖಿಲ ಕರ್ನಾಟಕ ನ್ಯಾಯ ನೀತಿ ಧರ್ಮ ಡಾ. ಅಂಬರೀಶ್ ಅಭಿಮಾನಿಗಳ ಸಂಘ ಸಲ್ಲಿಸಿರುವ ಮನವಿಯನ್ನು ಪತ್ರದೊಂದಿಗೆ ಲಗತ್ತಿಸಿರುವ ಸಚಿವ ರಾಮಲಿಂಗಾರೆಡ್ಡಿ, ಅಂಬರೀಶ್ ಅವರ ಸೇವೆ, ಜನಪ್ರಿಯತೆ ಹಾಗೂ ನಾಡಿನ ಮೇಲಿನ ಪ್ರೀತಿಯನ್ನು ಪುರಸ್ಕರಿಸಿ ಮುಂಬರುವ ಕನ್ನಡ ರಾಜ್ಯೋತ್ಸವ ಅಥವಾ ಯಾವುದೇ ಸೂಕ್ತ ಸಂದರ್ಭದಲ್ಲಿ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕರ್ನಾಟಕ ರತ್ನವನ್ನು ಮರಣೋತ್ತರವಾಗಿ ನೀಡಿ ಗೌರವಿಸಬೇಕು ಎಂದು ಕೋರಿದ್ದಾರೆ. ಸಚಿವರ ಈ ನಡೆಗೆ ಅಂಬಿ ಅಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಏತನ್ಮಧ್ಯೆ, ಈ ಹಿಂದೆ ಹಿರಿಯ ನಟಿ ತಾರಾ ಅನುರಾಧ ಅವರು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಖುದ್ದಾಗಿ ಭೇಟಿಯಾಗಿ ಅಂಬರೀಶ್ ಅವರಿಗೆ ಪ್ರಶಸ್ತಿ ನೀಡುವಂತೆ ಮನವಿ ಪತ್ರ ಸಲ್ಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.